ನೆನಪಿರಲಿ ಪ್ರೇಮ್ ಚಿತ್ರರಂಗಕ್ಕೆ ಕಾಲಿಟ್ಟು ಕರೆಕ್ಟಾಗಿ 24 ವರ್ಷ ಆಗಿದೆ. ಬೇರೆ ನಟರಿಗೆ ಹೋಲಿಸಿದರೆ ಪ್ರೇಮ್ ನಟಿಸಿದ ಚಿತ್ರಗಳ ಸಂಖ್ಯೆ ತೀರಾ ಕಡಿಮೆ. ಹಾಗೆ ನೋಡಿದರೆ ಪ್ರೇಮ್ ಇಂಡಸ್ಟ್ರಿಗೆ ಬಂದಾಗ ಹೀರೋಗಳ ಕೊರತೆ ಸಿಕ್ಕಾಪಟ್ಟೆ ಇತ್ತು. ಆಗಿನ್ನೂ ಗಣೇಶ್, ದುನಿಯಾ ವಿಜಿ, ಶ್ರೀನಗರ ಕಿಟ್ಟಿ, ಅಜಯ್ ರಾವ್ ಮೊದಲಾದವರೆಲ್ಲ ಹೀರೋಗಳಾಗಿರಲಿಲ್ಲ. ಪೋಷಕ ಪಾತ್ರಗಳಲ್ಲಷ್ಟೇ ಅಭಿನಯಿಸಿಕೊಂಡಿದ್ದರು. ಶರಣ್ ಕೋಮಲ್ ತರದ ಕಲಾವಿದರು ಕಾಮಿಡಿ ಪಾತ್ರಗಳನ್ನು ಮಾಡಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಕಿಚ್ಚ ಸುದೀಪ್ ಮತ್ತು ದರ್ಶನ್ […]
ಏಳೆಂಟು ಕೋಟಿ ಖರ್ಚು ಮಾಡಿ, ಬರೋಬ್ಬರಿ ನಾನ್ನೂರು ಕೋಟಿ ಲಾಭ ಮಾಡಿದ ಚಿತ್ರ ಕಾಂತಾರ. ಈ ಸಿನಿಮಾ ಇಂಥದ್ದೊಂದು ಮ್ಯಾಜಿಕ್ ಕ್ರಿಯೇಟ್ ಮಾಡತ್ತೆ ಅಂತಾ ಯಾರೆಂದರೆ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆ ಹೊತ್ತಿಗೆ ಹೊಂಬಾಳೆ ಫಿಲ್ಮ್ಸ್ ಎಂಭತ್ತು ಕೋಟಿ ಬಜೆಟ್ಟಿನ ಕೆ ಜಿ ಎಫ್ ಮಾಡಿ ಲಾಭ ಮಾಡಿತ್ತಲ್ಲಾ? ಶುರು ಮಾಡಿದಾಗ ಅವರ ಪಾಲಿಗದು ಸಣ್ಣದೊಂದು ಪ್ರಯತ್ನ ಎನ್ನುವಂತಿತ್ತು. ಬಿಡುಗಡೆಯ ನಂತರ ಆ ಚಿತ್ರ ಎಬ್ಬಿಸಿದ ಹವಾ ಹೊಂಬಾಳೆಯ ಕಾನ್ಫಿಡೆನ್ಸ್ ಅನ್ನು ಇಮ್ಮಡಿಗೊಳಿಸಿತು. ಸದ್ಯ ಕಾಂತಾರ-2 ತಯಾರಿ […]
ತಮಿಳುನಾಡಲ್ಲಿ ಕೂಡಾ ಮೊನ್ನೆ ದಿನ ಚುನಾವಣೆ ನಡೆದಿದೆ. ಸ್ಟಾರ್ ನಟರು ಮತದಾನ ಮಾಡುವ ಬೂತ್ ಗಳನ್ನು ಮೇಟೇಂನ್ ಮಾಡೋದು ಪೊಲೀಸರಿಗೆ ತುಂಬಾನೇ ಕಷ್ಟದ ಕೆಲಸ. ನಟ ತಲಾ ಅಜಿತ್ ಗೊತ್ತಲ್ಲಾ? ಸದಾ ಜನರಿಂದ ದೂರವೇ ಉಳಿಯಲು ಬಯಸಿ, ತಮ್ಮ ಪಾಡಿಗೆ ತಾವು ಕಾಡು ಮೇಡು ಅಲೆದುಕೊಂಡಿರುವ ವಿಕ್ಷಿಪ್ತ ಮನಸ್ಥಿತಿಯ ನಟ. ತಾವು ಹೋದಲ್ಲಿ ಬಂದಲ್ಲೆಲ್ಲಾ ಜನಜಂಗುಳಿ ಸೇರಬೇಕು, ಜೈಕಾರಗಳು ಮೊಳಗಬೇಕು ಅಂತಾ ಬಯಸೋದು ಸೆಲೆಬ್ರೆಟಿಗಳ ಸಾಮಾನ್ಯ ಮನಸ್ಥಿತಿ. ಆದರೆ ಅಜಿತ್ ಅದಕ್ಕೆ ಅಪವಾದ. ನನ್ನ ಅಭಿಮಾನಿಗಳು ಅನ್ನಿಸಿಕೊಂಡವರು […]
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಇಂದಿಗೆ ಪೂರ್ಣವಾಗಿದೆ. ಕಾಕತಾಳೀಯ ಎಂದರೆ ನಮ್ಮ ಚಿತ್ರದ ಚಿತ್ರೀಕರಣ ಕಳೆದವರ್ಷ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಆರಂಭವಾಗಿತ್ತು. ಈ ವರ್ಷ ಅವರ ಹುಟ್ಟುಹಬ್ಬದ […]
ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಗೌರಿ”. ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಸ್ಪಿನ್ ಮಾಂತ್ರಿಕ ಎಂದೆ ಖ್ಯಾತರಾಗಿರುವ ಅನಿಲ್ ಕುಂಬ್ಳೆ ಹಾಗೂ ಹೆಸರಾಂತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ಸೇರಿದಂತೆ ಸಾಕಷ್ಟು […]
ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್ ಮುಗಿಸಿರುವ ಎನ್ 1 ಅಕಾಡೆಮಿ ಸೂತ್ರಧಾರ ಸುನಿಲ್ ಕುಮಾರ್ ಬಿ.ಆರ್ ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ ಕೊಟ್ಟಿದ್ದಾರೆ. ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ […]
ಅಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ. ನಿನ್ನೆ ಪ್ರೇಮ್ ಜನ್ಮದಿನ.. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು. ಬಳಿಕ ನೆನಪಿರಲಿ ಪ್ರೇಮ್ ಮಾತನಾಡಿ, […]
ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಉತ್ತರಾಕಾಂಡದಲ್ಲಿ ನಟಿಸಲಿದ್ದಾರೆ. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ. “ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿ.ಎಂ ಗಿರಿರಾಜ್ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ . ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ “ರಾಮರಸ” ಎಂದು ನಾಮಕರಣ ಮಾಡಲಾಗಿದೆ. “ಜಟ್ಟ”, ” ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ […]
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10 […]