One N Only Exclusive Cine Portal

ಈ ಚಿತ್ರದಲ್ಲಿ ಸಿಂಧು ಲೋಕನಾಥ್ ಪಾತ್ರವೇನು ಗೊತ್ತಾ?

 

ಇನ್ನೇನು ವಾರವೊಂದು ಹೊರಳಿಕೊಂಡರೆ ವಿಶ್ವ ಮಹಿಳಾ ದಿನದ ಸಂಭ್ರಮ. ಸರಿಯಾಗಿ ಇದೇ ದಿನದಂದು ತೆರೆಗಾಣಲು ಸಜ್ಜಾಗಿರುವ ಚಿತ್ರ `ಹೀಗೊಂದು ದಿನ’. ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಹೊಸಾ ಆಲೋಚನೆ, ಹೊಸಾ ಪ್ರಯೋಗಗಳ ಪರ್ವ ಕಾಲವೊಂದು ಶುರುವಾಗಿದೆಯಲ್ಲಾ? ಅದರ ಕೊಂಡಿಯಂತೆ ತಯಾರಾಗಿ ಬಿಡುಗಡೆಯ ಹಂತಕ್ಕೆ ಈ ಚಿತ್ರ ಬಂದು ನಿಂತಿದೆ.

ಸಿಂಧು ಲೋಕನಾಥ್ ಮುಖ್ಯಭೂಮಿಕೆಯಲ್ಲಿರುವ ಹೀಗೊಂದು ದಿನ ಪಕ್ಕಾ ಮಹಿಳಾ ಪ್ರಧಾನವಾದ ಚಿತ್ರ. ಕಥಾ ಹಂದರವೂ ಸೇರಿದಂತೆ ಎಲ್ಲ ವಿಚಾರಗಳಲ್ಲಿಯೂ ಹೊಸತನ ಬೆರೆಸಿರುವ ಈ ಚಿತ್ರ ಕರ್ನಾಟಕದ ಮೊದಲ ಅನ್‌ಕಟ್ ಫೀಚರ್ ಹೊಂದಿರೋ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ವರೆಗೆ ಒಂದಷ್ಟು ಪಾತ್ರಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದ ಸಿಂಧು ಲೋಕನಾಥ್ ಈ ಚಿತ್ರದಲ್ಲಿ ಇಲ್ಲಿವರೆಗಿನ ಅಷ್ಟೂ ಪಾತ್ರಗಳಿಗಿಂತಲೂ ಭಿನ್ನವಾದ, ಸವಾಲಾದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರಂತೆ.

ಅಂದಹಾಗೆ ವಿಕ್ರಂ ಯೋಗಾನಂದ್ ನಿರ್ದೇಶನದ ಈ ಚಿತ್ರವನ್ನು ನಿರ್ಮಾಣ ಮಾಡಿರುವವರು ದಿವ್ಯದೃಷ್ಟಿ ಚಂದ್ರಶೇಖರ್. ಕನ್ನಡ ಚಿತ್ರರಂಗದಲ್ಲಿ ಹತ್ತು ವರ್ಷಗಳಿಂದ ಸಕ್ರಿಯರಾಗಿರುವ ಚಂದ್ರಶೇಖರ್ ಒಂದೊಳ್ಳೆ ಚಿತ್ರ ಮಾಡ ಬೇಕೆಂಬ ಉದ್ದೇಶದಿಂದ ಎರಡ್ಮೂರು ವರ್ಷಗಳಿಂದಲೂ ತಯಾರಿ ನಡೆಸಿದ್ದರು. ಕಡೆಗೂ ಹೀಗೊಂದು ದಿನ ಚಿತ್ರದ ಮೂಲಕ ಆ ಕನಸು ನನಸಾಗಿಸಿಕೊಂಡಿದ್ದಾರೆ. ನಿರ್ಮಾಪಕರೂ ಸೇರಿದಂತೆ ಇಡೀ ಚಿತ್ರ ತಂಡ ಟ್ರೈಲರ್‌ಗೆ ಸಿಕ್ಕ ವ್ಯಾಪಕ ಪ್ರತಿಕ್ರಿಯೆ ಕಂಡು ಖುಷಿಗೊಂಡಿದ್ದಾರೆ.

ಯಾರೇ ಯಶಸ್ವೀ ಪುರುಷರ ಹಿಂದೆ ಒಬ್ಬಳು ಹೆಣ್ಣಿರುತ್ತಾಳೆಂಬುದು ಲೋಕ ರೂಢಿಯ ಮಾತು. ಯಶಸ್ವೀ ಪುರುಷರ ಹಿಂದಿರುವ ಇಂಥಾ ಹೆಣ್ಣಿನ ತ್ಯಾಗವನ್ನು, ಕಷ್ಟವನ್ನು ಯಾರೂ ಮುನ್ನೆಲೆಗೆ ತಂದು ಮಾತಾಡೋದಿಲ್ಲ. ಆದರೆ ಈ ಚಿತ್ರದಲ್ಲಿ ಅಂಥಾ ಹೆಣ್ಣಿನ ಸೂಕ್ಷ್ಮ ಸಂಗತಿಗಳನ್ನು ರೋಚಕವಾದ ತಿರುವುಗಳ ಮೂಲಕ, ಚೆಂದದರ ಕಥಾ ಹಂದರದ ಮೂಲಕ ವಿವರಿಸಲಾಗಿದೆಯಂತೆ.

ಇನ್ನುಳಿದಂತೆ ಈ ಚಿತ್ರದಲ್ಲಿ ಘಟಾನುಘಟಿಗಳಾದ ನಟ ನಟಿಯರೇ ಅಭಿನಯಿಸಿದ್ದಾರೆ. ಶೋಭರಾಜ್, ಪದ್ಮಜಾ ರಾವ್, ಮಿತ್ರಾ ಮುಂತಾದ ನಟ ನಟಿಯದ ದಂಡೇ ಈ ಚಿತ್ರದಲ್ಲಿದೆ. ಈಗಾಗಲೇ ಟ್ರೈಲರ್ ಕೂಡಾ ಚಿತ್ರದ ಬಗ್ಗೆ ಕೌತುಕ ಹುಟ್ಟಿಸುವಲ್ಲಿ ಯಶ ಕಂಡಿದೆ. ವಿಶ್ವ ಮಹಿಳಾ ದಿನದಂದು ತೆರೆ ಕಾಣಲಿರುವ ಈ ಚಿತ್ರವನ್ನು ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆಂಬುದಷ್ಟೇ ಸದ್ಯದ ಕುತೂಹಲ.

Leave a Reply

Your email address will not be published. Required fields are marked *


CAPTCHA Image
Reload Image