One N Only Exclusive Cine Portal

‘ಹೀಗೊಂದು ದಿನ’ದಲ್ಲಿ ಅಂಥಾದ್ದೇನಿದೆ?

ಮಹಿಳಾ ದಿನದಂದೇ ತೆರೆ ಕಾಣಲು ಸಜ್ಜಾಗಿರುವ ಹೀಗೊಂದು ಚಿತ್ರದ ಬಗ್ಗೆ ಪ್ರೇಕ್ಷಕರ ವಲಯದಲ್ಲೊಂದು ಕುತೂಹಲ ಹುಟ್ಟಿಕೊಂಡಿದೆ. ಮದುವೆಯಾದ ನಂತರ ನಾಪತ್ತೆಯಾದಂತಿದ್ದ ಸಿಂಧು ಲೋಕನಾಥ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಕಥಾ ಹಂದರವೇನು? ಅದರಲ್ಲಿನ ವಿಶೇಷತೆಯೇನು ಮುಂತಾದ ನಾನಾ ಪ್ರಶ್ನೆಗಳ ಪ್ರೇಕ್ಷಕರ ನಡುವೆ ಹುಟ್ಟಿಕೊಂಡಿದೆ.

ಯಾವುದೇ ಚಿತ್ರದ ಪಾಲಿಗಾದರೂ ತಾನೇ ತಾನಾಗಿ ಹುಟ್ಟಿಕೊಳ್ಳುವ ಇಂಥಾ ನಿರೀಕ್ಷೆಯೇ ಗೆಲುವಿನ ಮೊದಲ ಮೆಟ್ಟಿಲು. ಅಂಥಾದ್ದೊಂದು ಮೆಟ್ಟಿಲೇರಿ ನಿಂತಿರುವ ಖುಷಿಯಲ್ಲಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಸೇರಿದಂತೆ ಚಿತ್ರತಂಡ ಮಿಂದೇಳುತ್ತಿದೆ!

ಹೀಗೊಂದು ದಿನ ಅನ್‌ಕಟ್ ಮೂವಿ ಎಂಬ ಕಾರಣದಿಂದಲೇ ಭಾರೀ ಸದ್ದು ಮಾಡುತ್ತಿದೆ. ಅಂದಹಾಗೆ ಅನ್‌ಕಟ್ ಮೆಥೆಡ್ಡಿನಲ್ಲಿ ಒಂದು ಚಿತ್ರವನ್ನು ರೂಪಿಸೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ನಿರ್ದೇಶಕರು ಸೇರಿದಂತೆ ಇಡೀ ಚಿತ್ರತಂಡ ಸಮರ್ಥವಾಗಿ ನಿಭಾಯಿಸಿದ ಖುಷಿಯಲ್ಲಿದೆ. ಇದು ಎರಡು ಘಂಟೆಯಲ್ಲಿ ನಡೆಯೋ ಕಥಾ ಹಂದರ ಹೊಂದಿರೋ ಚಿತ್ರ. ಒಂದ್ಯಾವುದೋ ಗುರಿಯಿಟ್ಟುಕೊಂಡು ಮನೆಯಿಂದ ಹೊರ ಬೀಳೋ ಹುಡುಗಿಯ ಸುತ್ತಾ ಎರಡು ಘಂಟೆಗಳ ಕಾಲ ನಡೆಯುವ ವಿದ್ಯಮಾನ ಈ ಚಿತ್ರದ ಮುಖ್ಯ ವಿಚಾರ.

ಇದಕ್ಕಾಗಿ ದಿನಾ ಬೆಳಗ್ಗೆ ಆರರಿಂದ ಎಂಟು ಘಂಟೆವರೆಗೆ ಶೂಟ್ ಮಾಡಲಾಗುತ್ತಿತ್ತಂತೆ. ಅಷ್ಟೂ ಜನ ಕಲಾವಿದರು ಹೊಸಾ ಪ್ರಯೋಗವೆಂಬ ಕಾರಣದಿಂದ ಸಾಥ್ ನೀಡಿದ್ದಾರೆಂಬ ತೃಪ್ತಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಅವರದ್ದು. ಮೊದಲ ಚಿತ್ರದಲ್ಲಿಯೇ ಸವಾಲಿನ ಕಥಾ ಹಂದರವನ್ನು ಕೈಗೆತ್ತಿಕೊಂಡು ಚಿತ್ರವನ್ನು ಮಾಡಿ ಮುಗಿಸಿರುವ ನಿರ್ಮಾಪಕ ಚಂದ್ರಶೇಖರ್ ಭರಪೂರವಾದ ಗೆಲುವೊಂದರ ನಿರೀಕ್ಷೆಯಲ್ಲಿದ್ದಾರೆ.

 

Leave a Reply

Your email address will not be published. Required fields are marked *


CAPTCHA Image
Reload Image