One N Only Exclusive Cine Portal

ಅತ್ಯುತ್ತಮ ಸಂಕಲನ : ಕೆ ಎಂ ಪ್ರಕಾಶ್

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಇದನ್ನು ಪ್ರಶಸ್ತಿ ಅನ್ನಬೇಕಾ? ಗೌರವದ ಕಾಣಿಕೆ ಅನ್ನಬೇಕಾ ಎಂಬುದು ಓದುಗರಿಗೆ ಬಿಟ್ಟದ್ದು. ಆದರೆ ಒಂದು ವರ್ಷದ ಅಷ್ಟೂ ಚಿತ್ರಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ, ಪ್ರತಿಭೆಯಿಂದ ಪ್ರೇಕ್ಷಕರ ಮನ ಗೆದ್ದ, ಕ್ರಿಯೇಟಿವಿಟಿಯಿಂದ ಗಮನ ಸೆಳೆದವರನ್ನು ವರ್ಷದ ಕೊನೆಯಲ್ಲಿ ನೆನೆಸಿಕೊಂಡು ಗೌರವಿಸೋ ಮಹದಾಸೆಯಿಂದ ಸಿನಿಬಜ಼್ ಸ್ಟಾರ್ ಆಫ್ ದಿ ಇಯರ್ -2017 ರೂಪಿಸಲ್ಪಟ್ಟಿದೆ. ಒಂದು ಸಿನಿಮಾ ರೂಪುಗೊಳ್ಳಬೇಕೆಂದರೆ ಅದರ ವಿವಿಧ ವಿಭಾಗಗಳಲ್ಲಿ ಹಲವು ಮಂದಿ ಕೆಲಸ ಮಾಡಿರುತ್ತಾರೆ. ಅದನ್ನೇ ಉಸಿರಾಡಿರುತ್ತಾರೆ. ಅಂಥಾ ಎಲ್ಲಾ ವಿಭಾಗಗಳನ್ನೂ ಜಾಲಾಡಿ ಒಬ್ಬೊಬ್ಬರನ್ನು ಗೌರವಿಸೋ ಪ್ರಯತ್ನವನ್ನು ನಾವು ಮಾಡಿದ್ದೇವೆ. ಇದರಾಚೆಗೆ ಪುರಸ್ಕಾರಕ್ಕೆ ಪಾತ್ರರಾಗೋ ಅರ್ಹತೆ ಇರುವವರು ಖಂಡಿತಾ ಇದ್ದಾರೆ. ಆದರೆ ಒಂದು ಮಿತಿಯೊಳಗೆ ಗೌರವವನ್ನಿಲ್ಲಿ ಕೊಡಮಾಡಿದ್ದೇವೆ
ನಮ್ಮ ಆಯ್ಕೆಯ ಒಬ್ಬೊರ ಹೆಸರೂ ಒಂದೊಂದು ಪೋಸ್ಟ್ ಮೂಲಕ ಇಲ್ಲಿ ಅನಾವರಣಗೊಳ್ಳಲಿದೆ

ಕನ್ನಡ ಚಿತ್ರಗಳಲ್ಲಿ ಸಂಕಲನಕಾರರಾಗಿ ಬೇಡಿಕೆಯಲ್ಲಿರುವವರು ಕೆ ಎಂ ಪ್ರಕಾಶ್. ಕಸುಬುದಾರಿಕೆ, ಕ್ರಿಯಾಶೀಲತೆ ಮತ್ತು ಚುರುಕುತನಗಳಿಂದಲೇ ಹೆಸರು ಮಾಡಿರೋ ಪ್ರಕಾಶ್ ಕಲಾತ್ಮಕ ಕತ್ತರಿ ಪ್ರಯೋಗಕ್ಕೆ ಹೆಸರಾಗಿದ್ದಾರೆ. ಚೆದುರಿದ ದೃಷ್ಯಗಳನ್ನೆಲ್ಲ ಕಲಾತ್ಮಕವಾಗಿ ಜೋಡಿಸಿ ಆ ಸಿನಿಮಾವನ್ನು ದೃಷ್ಯ ಕಾವ್ಯವಾಗಿಸಲು ಶ್ರಮಿಸುವ ಅವರು ಸಂಕಲನಕಾರರಾಗಿ ಇನ್ನೂ ಎತ್ತರಕ್ಕೇರುತ್ತಾರೆಂಬುದಕ್ಕೆ ಅವರ ಕೆಲಸವೇ ಸಾಕ್ಷಿಯಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © CINIBUZZ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Leave a Reply

Your email address will not be published. Required fields are marked *


CAPTCHA Image
Reload Image