One N Only Exclusive Cine Portal

ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಕಣಕ್ಕಿಳಿಯುತ್ತಾರಾ ಕಿಚ್ಚ?

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಇಡೀ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿದೆ. ಇಂಥಾ ವಾತಾವರಣದಲ್ಲಿ ರಾಜಕೀಯ ವಲಯದಲ್ಲಿ ಬಿರುಸಿನ ವಾತಾವರಣ ಇರೋದು ಸಹಜವೇ. ಆದರೆ ಈ ಸಲ ಚಿತ್ರರಂಗದಲ್ಲಿಯೂ ಚುನಾವಣಾ ಪ್ರಭಾವ ಬಲು ಜೋರಾಗಿದೆ. ಆ ಸ್ಟಾರ್ ರಾಜಕೀಯಕ್ಕಿಳೀತಾರೆ, ಮತ್ಯಾರಿಗೋ ಟಿಕೆಟು ಪಕ್ಕಾ ಆಗಿದೆ ಎಂಬೆಲ್ಲ ರೂಮರ್ ಮಾಮೂಲಿ. ಆದರೆ ಈ ಸಲ ಈ ರೇಸಿನಲ್ಲಿ ಕಿಚ್ಚಾ ಸುದೀಪ್ ಅವರ ಹೆಸರೂ ಚಾಲ್ತಿಯಲ್ಲಿರೋದು ನಿಜವಾದ ವಿಶೇಷ!
ಸುದೀಪ್ ರಾಜಕೀಯಕ್ಕೆ ಬರುತ್ತಾರೆಂಬ ಅಂತೆ ಕಂತೆಯಾಗಲಿ, ಅವರನ್ನು ಸೆಳೆದುಕೊಳ್ಳಲು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಒಳಗೊಳಗೇ ಕಸರತ್ತು ನಡೆಸೋದಾಗಲಿ ಹೊಸದೇನೂ ಅಲ್ಲ. ಆದರೆ ಒಂದು ಮೂಲದ ಪ್ರಕಾರ ಈ ಸಲ ರಾಜಕೀಯಕ್ಕೆ ಅಡಿಯಿರಿಸಲು ತೀರ್ಮಾನ ಮಾಡಿಕೊಂಡಿರೋ ಸುದೀಪ್ ಅದಕ್ಕಾಗಿ ತಯಾರಾಗಲಾರಂಭಿಸಿದ್ದಾರಂತೆ!

ಹಾಗಾದರೆ ಅವರು ಯಾವ ಪಕ್ಷದಿಂದ ಸ್ಪರ್ಧಿಸ್ತಾರೆ, ಕ್ಷೇತ್ರ ಯಾವುದು ಅಂತೆಲ್ಲ ಸಾಲು ಸಾಲು ಪ್ರಶ್ನೆಗಳೇಳೋದು ಸಹಜವೇ. ಈ ನಿಟ್ಟಿನಲ್ಲಿ ನೋಡ ಹೋದರೆ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಫರ್ಧಿಸಲು ಸ್ವತಃ ಸುದೀಪ್ ಇಚ್ಛೆ ಹೊಂದಿದ್ದಾರಂತೆ. ಅವರು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲಿದ್ದು, ಸುದೀಪ್ ಅವರ ರಾಜಕೀಯ ಎಂಟ್ರಿ ಮತ್ತು ಅವರು ಬಯಸೋ ಕ್ಷೇತ್ರವನ್ನು ನೀಡಲು ರಾಹುಲ್ ಗಾಂಧಿಯನ್ನು ಒಪ್ಪಿಸೋ ಜವಾಬ್ದಾರಿಯನ್ನು ನಟಿ ರಮ್ಯಾ ವಹಿಸಿಕೊಂಡಿದ್ದಾರಂತೆ!


ಈ ಕ್ಷೇತ್ರದಲ್ಲಿ ತೊಂಬತ್ತು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನಾಯಕ ಸಮಾಜದ ಮತದಾರರಿದ್ದಾರೆ. ಇದೂ ಕೂಡಾ ಸುದೀಪ್ ಗೆಲುವಿಗೆ ಸಹಕಾರಿಯಾಗುತ್ತದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಪಾಳೆಯದಲ್ಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮೂಲದ, ಈ ಹಿಂದೆ ನಾಲ್ಕು ಬಾರಿ ಮೊಳಕಾಲ್ಮೂರು ಕ್ಷೇತ್ರದ ಶಾಸಕನಾಗಿದ್ದು, 2013ರಲ್ಲಿ ಸೋಲುಕಂಡು ರಾಮುಲು ಲೋಕಸಭಾಸ್ಥಾನಕ್ಕೆ ಆಯ್ಕೆಯಾದ ಕಾರಣದಿಂದ ತೆರವಾದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ನೇರಳಗುಂಟೆ ತಿಪ್ಪೇಸ್ವಾಮಿ ಗೆಲುವು ಸಾಧಿಸಿದ್ದರು. ಇವರ ಜೊತೆಗೆ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರೋರ್ವರು ಈ ಬಾರಿ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಈ ಕ್ಷೇತ್ರಕ್ಕೆ ಅನೇಕರು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅದರಲ್ಲಿ ಮಾಜಿ ಎಂಪಿ ನಟ ಶಶಿಕುಮಾರ್ ಕೂಡಾ ಒಬ್ಬರು. ಅವರೂ ಕೂಡಾ ಈ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಟಿಕೆಟ್ ಪಡೆದು ಶಾಸಕನಾಗೋ ಹಂಬಲ ಹೊಂದಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಚಳ್ಳಕೆರೆ ಕ್ಷೇತ್ರದಿಂದ ಶಶಿಕುಮಾರ್ ಟಿಕೆಟ್ ಬಯಸಿದ್ದರಾದರೂ ಸಿಕ್ಕಿರಲಿಲ್ಲ. ಆಗ ಟಿಕೆಟ್ ರಘುಮೂರ್ತಿ ಪಾಲಾಗಿತ್ತು. ಈ ಬಾರಿ ಶಶಿಕುಮಾರ್ ಕಣ್ಣಿಟ್ಟಿರೋ ಈ ಕ್ಷೇತ್ರ ಕಿಚ್ಚಾ ಸುದೀಪ್ ಅವರ ಪಾಲಾದರೂ ಅಚ್ಚರಿಯೇನಿಲ್ಲ. ಯಾಕೆಂದರೆ ಕಿಚ್ಚ ಒಪ್ಪಿದರೆ ಕಾಂಗ್ರೆಸ್ ನಾಯಕರ್‍ಯಾರೂ ಆ ಬಗ್ಗೆ ಚಕಾರವೆತ್ತೋದಿಲ್ಲ ಎಂಬಂಥಾ ವಾತಾವರಣ ಇದೆ.


ಇನ್ನು ಇದೇ ಚಿರ್ತದುರ್ಗ ಟೌನ್ ಕ್ಷೇತ್ರದಿಂದ ಮೊಗವೀರ ಸಮುದಾಯದ ನಟಿ ಭಾವನಾ ಕೂಡಾ ಆಕಾಂಕ್ಷಿಯಾಗಿದ್ದಾರಂತೆ. ಆದರೆ ಬೇರೆಲ್ಲರ ಕಥೆ ಏನೋ ಹೇಳಲು ಬರೋದಿಲ್ಲ. ಕಿಚ್ಚಾ ಸುದೀಪ್ ಮನಸು ಬದಲಾವಣೆ ಮಾಡಿಕೊಳ್ಳದೆ ರಾಜಕೀಯಕ್ಕಿಳಿದರೆ ಅವರು ಮೊಳಕಾಲ್ಮೂರು ಕ್ಷೇತ್ರದಿಂದಲೇ ಕಣಕ್ಕಿಳಿಯೋದು ಖಚಿತ. ಈ ಬಗ್ಗೆ ಡಾ ವಿಷ್ಣು ಸ್ಮಾರಕ ವಿಚಾರವಾಗಿ ಮಾತಾಡಲು ಹೋದಾಗ ಖುದ್ದು ಸುದೀಪ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ ಮಾತುಕತೆ ನಡೆದಿದೆಯಂತೆ.

copying or reproducing the above content in any format without approval is criminal offence and will be prosecuted in Bengaluru court ©cinibuzz

copying or reproducing the above content in any format without approval is criminal offence and will be prosecuted in Bengaluru court © CINIBUZZ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Leave a Reply

Your email address will not be published. Required fields are marked *


CAPTCHA Image
Reload Image