ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ “ಗೌರಿ” ಆಗಮನ..
ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಇಂದ್ರಜಿತ್ ಲಂಕೇಶ್ ಅವರು ರಾಜಾಜಿನಗರದ ವಿದ್ಯಾವಿಹಾರ (ಎಂ ಇ ಎಸ್ ಮ್ಯಾನೇಜ್ಮೆಂಟ್) ಕಾಲೇಜಿನಲ್ಲಿ ಅದ್ದೂರಿ […]
ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’…ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ.
ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್ ‘ಒನ್ ಅಂಡ್ ಹಾಫ್’ ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. […]
ಅದ್ಭುತವಾಗಿ ಮೂಡಿಬಂದಿದೆ ರಾಧಿಕಾ ಕುಮಾರಸ್ವಾಮಿ ಅಭಿನಯದ “ಅಜಾಗ್ರತ”.
ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ […]
ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ ಮೂರನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು .
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಇತ್ತೀಚಿಗೆ ಬಿಡುಗಡೆಯಾಗಿತ್ತು. ಕವಿರಾಜ್ ಅವರು ಬರೆದು ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ “ಚಿನ್ನಮ್ಮ” ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಏಳು ಮಿಲಿಯನ್ ಗೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ. […]
ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ.
ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ಹಿರಣ್ಯ ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ಹಿರಣ್ಯನ ಹೃದಯ ಮೀಟುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಅಭಿನಯಿಸಿರುವ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, […]
ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ಫ್ಲೈ’ ತಂಡ ಸೇರಿದ ಸುಧಾರಾಣಿ.
ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ.. ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ. ಈಗಾಗಲೇ […]
‘ಚೌಕಿದಾರ್’ಗೆ ಧನ್ಯ ರಾಮ್ ಕುಮಾರ್ ಎಂಟ್ರಿ… ಪೃಥ್ವಿ ಅಂಬಾರ್ ಗೆ ಜೋಡಿಯಾದ ದೊಡ್ಮನೆ ಬ್ಯೂಟಿ
ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್..ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್ ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ ಧನ್ಯರಾಮ್ ಕುಮಾರ್ ಪೃಥ್ವಿ ಅಂಬಾರ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿತರಾಗಿದ್ದ ಧನ್ಯ ಇತ್ತೀಚೆಗಷ್ಟೇ ಜಡ್ಜಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. […]
ಭ್ರಷ್ಟರ ವಿರುದ್ಧ ಸಮರ ಸಾರಿದ ಸೇನಾಪತಿ..ಸಾಹಸ-ದೇಶಭಕ್ತಿಯ ಕಮಲ್ ‘ಇಂಡಿಯನ್ -2’ ಟ್ರೇಲರ್
ಯುವನಿವರ್ಸಲ್ ಸ್ಟಾರ್, ಉಳಗನಾಗನ್ ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಇಂಡಿಯನ್ -2 ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಲವು ಶೇಡ್ ನಲ್ಲಿ ಕಮಲ್ ಕಮಾಲ್ ಮಾಡಿದ್ದು, ಶಂಕರ್ ಟೇಕಿಂಗ್ ಮತ್ತೊಮ್ಮೆ ಒಳ್ಳೆ ಮಾರ್ಕ್ಸ್ ಸಿಗಲಿದೆ. 1996 ರ ಬ್ಲಾಕ್ಬಸ್ಟರ್ “ಇಂಡಿಯನ್” ಸಿನಿಮಾದ ಮುಂದುವರೆದ ಭಾಗವಾಗಿರುವ “ಇಂಡಿಯನ್ 2” ನಲ್ಲಿ ಸೇನಾಪತಿಯಾಗಿ ಕಮಲ್ ಹಾಸನ್ ಮರಳಿದ್ದಾರೆ. ರಾಷ್ಟ್ರವನ್ನು ಕಾಡುತ್ತಿರುವ ವ್ಯವಸ್ಥಿತ ಭ್ರಷ್ಟಾಚಾರ, ನಿರುದ್ಯೋಗ, ಸಮಾಜವನ್ನು ಪೀಡಿಸುವ ಅಭಿವೃದ್ಧಿಯ ಕೊರತೆಯ ಸಮಸ್ಯೆಗಳ ವಿರುದ್ಧ ಕಮಲ್ ಹಾಸನ್ […]
ವಿನೂತನ ಶೇರ್ಷಿಕೆ ಮತ್ತು ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ರವರ ೧೩ ನೇ ಹೊಸ ಚಿತ್ರ “ಹೇ ಪ್ರಭು” ಸದ್ದಿಲ್ಲದೆ ಮೊದಲ ಹಂತದ ಶೂಟಿಂಗ್ ಮುಗಿಸಿದೆ.
“ಹೇ ಪ್ರಭು “, ಈ ಹೆಸರು ಕೇಳಿದ ತಕ್ಷಣ ನೀವು ದೇವರು ಇರಬಹುದ ಅಧವಾ “ಪ್ರಭು” ಅಂದರೇ ನಮ್ಮ ನಾಡ ಪ್ರಭು ಕೆಂಪೇಗೌಡರಿರಬಹುದಾ ಎಂಬ ಕುತೂಹಲ ಮೂಡಿಸುತ್ತದೆ . ಸದ್ಯಕ್ಕೆ ಚಿತ್ರ ತಂಡ ಶೀರ್ಷಿಕೆ ವಿನ್ಯಾಸ (ಟೈಟಲ್ ಲೋಗೋ) ಅನಾವರಣ ಗೊಳಿಸಿದೆ, ಇದರಲ್ಲಿ ಕೆಂಪೇಗೌಡರ ಚಿತ್ರವಿರುವುದು ಸ್ವಲ್ಪ ಕುತೂಹಲ .. ! “ಹೇ ಪ್ರಭು”, ಇನ್ನು ೫ ದಿನಗಳ ಶೂಟಿಂಗ್ ಮುಗಿದರೆ ಚಿತ್ರಕರಣ ಮುಕ್ತಾಯವಾಗುತ್ತದೆ ಎಂದು ತಂಡ ಹೇಳಿಕೊಂಡಿದೆ , ಜೊತೆಜೊತೆಯಾಗಿ ಸಂಕಲನ ಕಾರ್ಯಕೂಡ ಪ್ರಗತಿಯಲ್ಲಿದ್ದು ನಿರ್ದೇಶಕರು […]
ಅಂಬಾರಿ ಆನೆ ಬಂಧಿಯಾದಮೇಲೆ…
ಅದು ಪಟ್ಟದ ಆನೆ. ಕನ್ನಡ ಚಿತ್ರರಂಗವೆನ್ನುವ ಅಂಬಾರಿಯನ್ನು ಹೊತ್ತು ಸಾಗುತ್ತಿತ್ತು. ಗಾಂಭೀರ್ಯ ಮರೆತ ಗಜ ಪುಂಡಾಟ, ಹಾವಳಿ ಶುರು ಮಾಡಿತು. ಕಡೆಗೆ ʻಕೊಲೆಗಡುಕ ಆನೆʼ ಎನ್ನುವ ಆರೋಪ ನೆತ್ತಿಗೇರಿಸಿಕೊಂಡಿತು. ಕುಮ್ಕಿ ಕಾರ್ಯಾಚರಣೆ ಮಾಡಿ ಆನೆಯನ್ನು ಬಂಧಿಸಲಾಯಿತು. ಅಲ್ಲೀತನಕ ಪಟ್ಟದಾನೆಯನ್ನು ಅಣ್ಣ, ತಮ್ಮ, ಬಾಸು ಅಂತಾ ಹೇಳಿಕೊಂಡು ತಿರುಗುತ್ತಿದ್ದ ಮರಿ, ಮುದಿ ಆನೆಗಳೆಲ್ಲಾ ಗರ್ನಾಲು ಶಬ್ದಕ್ಕೆ ಗಾಬರಿ ಬಿದ್ದಂತೆ ಗಾಯಬ್ ಆಗಿವೆ… ಕುಂತರೂ ನಿಂತರೂ ʻಡಿ ಬಾಸ್ʼ ಅಂತಾ ಹೆಸರು ಹೇಳಿಕೊಂಡು ತಿರುಗುತ್ತಿದ್ದ ಪಡೆಯೇ ಇತ್ತು. ʻದರ್ಶನ್ ಹುಡುಗʼ […]