ANAND_AUDIO_SUCCESS_STORY
ನೀತಿ, ನಿಯತ್ತು, ಪ್ರಾಮಾಣಿಕತೆ ಇದ್ದರೆ ಯಾವುದೇ ಕ್ಷೇತ್ರವಿರಲಿ, ವ್ಯಾಪಾರವಾಗಲಿ ಯಶಸ್ಸು ಬಾಚಿ ತಬ್ಬುತ್ತದೆ ಅನ್ನೋದಕ್ಕೆ ಉದಾಹರಣೆಯಂತೆ ನಿಂತಿರುವ ಸಂಸ್ಥೆ ಆನಂದ್ ಆಡಿಯೋ! ಕನ್ನಡ ಚಿತ್ರರಂಗದ ಮಟ್ಟಿಗೆ ಆಡಿಯೋ ಹಕ್ಕುಗಳನ್ನು ಪಡೆಯಲು ಹತ್ತು ಹಲವು ಚಾನೆಲ್ಲುಗಳಿವೆ. ಒಬ್ಬೊಬ್ಬರದ್ದೂ ಒಂದೊಂದು ಬಗೆಯ ವ್ಯಾಪಾರೀ ಸೂತ್ರಗಳು. ಯಾರ ಪಾಲಿಸಿ ಏನೇ ಇರಲಿ, ಆನಂದ್ ಆಡಿಯೋ ಮುಂಚೂಣಿ ಸ್ಥಾನದಲ್ಲಿ ನಿಂತಿದೆ. `ಆನಂದ್ ಆಡಿಯೋ ಆಡಿಯೋ ರೈಟ್ಸ್ ತೆಗೆದುಕೊಂಡಿದೆ’ ಅನ್ನೋದೇ ಸ್ಯಾಂಡಲ್ವುಡ್ ಸಿನಿಮಾಗಳಿಗೆ ಪ್ರತಿಷ್ಟೆ ಎನ್ನುವಷ್ಟರ ಮಟ್ಟಿಗೆ ಸಂಸ್ಥೆ ಬ್ರಾಂಡ್ ಉಳಿಸಿಕೊಂಡಿದೆ. ಆನಂದ್ ಆಡಿಯೋದವರು […]
ತಲ್ವಾರ್ ಮೇಕಿಂಗ್ ಜತೆ ಮೊದಲ ಹಾಡು
ಈ ಹಿಂದೆ ಮಮ್ತಾಜ್ ಎಂಬ ಚಿತ್ರ ನಿರ್ದೇಶಿಸಿದ್ದ ಮುರಳಿ ಅವರ ಸಾರಥ್ಯದ ಮತ್ತೊಂದು ಚಿತ್ರ ತಲ್ವಾರ್. ಧರ್ಮ ಕೀರ್ತಿರಾಜ್ ನಾಯಕನಾಗಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಜನವರಿ ಕೊನೆಯ ವಾರ ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಮೇಕಿಂಗ್ ವಿಡಿಯೋ ಹಾಗೂ ಮೊದಲ ಗೀತೆಯನ್ನು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮಾಸ್ ಕಂಟೆಂಟ್ ಒಳಗೊಂಡಿರುವ ಈ ಚಿತ್ರದ ‘ಪಲ್ ಮರುಕಳಿಸಿತೇನೋ..’ ಎಂಬ ಮಧುರ […]
“ಗ್ಯಾಪಲ್ಲೊಂದು ಸಿನಿಮಾ” ಮಾಡಿ “ಓಮಿನಿ”ಯಲ್ಲಿ “ಪಾಠಶಾಲಾ”ಗೆ ಬಂದ ಹೆದ್ದೂರ್ ಮಂಜುನಾಥ್ ಶೆಟ್ಟಿ .
ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ “ಪಾಠಶಾಲಾ” ತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಹೆಚ್ ಎಸ್ ರಾಘವೇಂದ್ರ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ವಿಜಯ್ ಶೆಟ್ಟಿ, “ಕೆರಭೇಟೆ” ಖ್ಯಾತಿಯ ಗೌರಿಶಂಕರ್, ರವೀಂದ್ರ ಸಿಂಗ್ […]
ಬದುಕಿನ ಪಾಠ ಹೇಳಿಕೊಡುವ ಔಟ್ ಆಫ್ ಸಿಲಬಸ್
ನಿಜಾ ತಾನೆ? ಶಿಕ್ಷಣವನ್ನು ಹೇಳಿಕೊಡಲು ಅಗಣಿತ ವಿದ್ಯಾಸಂಸ್ಥೆಗಳು, ಯೂನಿವರ್ಸಿಟಿಗಳು ಇವೆ. ಬದುಕಿನ ಪಾಠ ಹೇಳಿಕೊಡಲು ಯಾವ ಶಾಲೆಯೂ ಇಲ್ಲ. ತುಂಬಾ ಜನ ಅಕಾಡೆಮಿಕ್ ಆಗಿ ಜಾಸ್ತಿ ಕಲಿತಿರುತ್ತಾರೆ. ಅತಿ ದೊಡ್ಡ ಹುದ್ದೆಯಲ್ಲಿರುತ್ತಾರೆ. ಬುದ್ಧಿವಂತರು ಅನ್ನಿಸಿಕೊಂಡಿರುತ್ತಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆಯನ್ನೂ ಮಾಡಿರುತ್ತಾರೆ. ಹಣ ಸಂಪಾದನೆ ಅನ್ನೋದು ಅವರ ಪಾಲಿಗೆ ತುಂಬಾನೇ ಸಣ್ಣ ವಿಷಯ. ಆದರೆ ಖಾಸಗೀ ಬದುಕಿನಲ್ಲಿ ಗೆಲ್ಲುವ ಕಲೆ, ಬುದ್ದಿವಂತಿಕೆ, ಸ್ಥಿತಪ್ರಜ್ಞ ಮನಸ್ಥಿತಿ, ಪ್ರಬುದ್ಧತೆ ಸಿದ್ದಿಸಿರೋದಿ ಲ್ಲ.. ಪರ್ಸನಲ್ ಲೈಫೆನ್ನುವುದು ನಿಜಕ್ಕೂ ಹಡಾಲೆದ್ದುಹೋಗಿರುತ್ತದೆ. ಎಲ್ಲದರಲ್ಲೂ ಗೆದ್ದವರು ಬದುಕುವ […]
ರಥಾವರ ನಿರ್ದೇಶಕರ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ…..
‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ ಚಿತ್ರಕ್ಕೆ ಕುಂಬಳಕಾಯಿ ಹೊಡೆಲಾಯಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿ ಗೋಷ್ಠಿಯಲ್ಲಿ ಚೌಕಿದಾರ್ ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ಈ ಚಿತ್ರದಿಂದ ಬಹಳಷ್ಟು ಕಲಿಯಲು ಸಿಕ್ಕಿದೆ. ನುರಿತ ನಿರ್ದೇಶಕರು ಇದ್ದಾಗ ಹೇಗೆ ಬೇಕು ಯಾವ ರೀತಿ ಬೇಕು ಅನ್ನೋದನ್ನು ಅವರು […]
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ನೂತನ ಚಿತ್ರ “#MB” .
ಮುಂಬೈನ ADD – ONE ಫಿಲಂಸ್ ನಿರ್ಮಾಣದ ಈ ಚಿತ್ರಕ್ಕೆ ” ವಲ್ಲರಸು” ಖ್ಯಾತಿಯ ಎನ್ ಮಹಾರಾಜನ್ ನಿರ್ದೇಶನ . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “#MB” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD – ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯಕಾಂತ್ ಅಭಿನಯದ ಸೂಪರ್ ಹಿಟ್ “ವಲ್ಲರಸು” […]
“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ ನಾಯಕ – ನಾಯಕಿ .
ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ . MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ […]
“FIR 6to6” ಚಿತ್ರದ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ
ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ […]
ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .
ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. RAP ಶೈಲಿಯಲ್ಲಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. […]
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ […]