ಬೆಂಗಳೂರಿನಲ್ಲಿ ‘ವೀಕ್ ಎಂಡ್‘

Picture of Cinibuzz

Cinibuzz

Bureau Report


ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ ‘ವೀಕ್ ಎಂಡ್‘ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.  ಚಿತ್ರದಲ್ಲಿ ಸಾಫ಼್ಟ್‌ವೇರ್ ಉದ್ಯೋಗಿಯಾಗಿರುವ ನಾಯಕ ಕಾರ್ಯದೊತ್ತಡದ ನಡುವೆಯೂ ತನ್ನ ಸಹುದ್ಯೋಗಿಗಳೊಡನೆ ಒಂದಿಷ್ಟು ತರಲೆ – ತಮಾಷೆ ಮಾಡುವ ಸನ್ನೆವೇಶದ ಚಿತ್ರೀಕರಣ ಬನಶಂಕರಿಯ ಖಾಸಗಿ ಕಂಪನಿಯೊಂದರಲ್ಲಿ ಚಿತ್ರಿಸಿಕೊಳ್ಳಲಾಯಿತು. ನಾಯಕ ಮಿಲಿಂದ್, ನಾಗಭೂಷಣ್, ಶಿವಕುಮಾರ್, ನಿತು ಬಾಲ ಹಾಗೂ ವೀಣಾ ಜಯಶಂಕರ್ ಈ ಭಾಗದ ಚಿತ್ರೀಕರಣದಲ್ಲಿ ಅಭಿನಯಿಸಿದ್ದರು.

ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.  ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಒಂದು ಚೇಸಿಂಗ್ ದೃಶ್ಯವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.  ಮಿಲಿಂದ್ ಅವರು ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

#

ಇನ್ನಷ್ಟು ಓದಿರಿ

Scroll to Top