ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅವರಿಂದ ‘ತ್ರಯಂಬಕಂ’ ಚಿತ್ರದ ಟ್ರೇಲರ್ ಬಿಡುಗಡೆ

Picture of Cinibuzz

Cinibuzz

Bureau Report


ಫ಼್ಯೂಚರ್ ಎಂಟರ್‌ಟೈನ್‌ಮೆಂಟ್ ನಿರ್ಮಾಣದ ‘ತ್ರಯಂಬಕಂ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಫ಼ೆಭ್ರವರಿ ೨೩ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ರಾಘವೇಂದ್ರ ರಾಜಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ಟ್ರೇಲರನ್ನು ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಲಿದ್ದಾರೆ.

ದಯಾಳ್ ಪದ್ಮನಾಭನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ರಾಘವೇಂದ್ರ ರಾಜಕುಮಾರ್, ರೋಹಿತ್, ಅನುಪಮ ಗೌಡ ಇದ್ದಾರೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಗಣೇಶ್ ನಾರಾಯಣನ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಬಿ.ರಾಕೇಶ್ ಅವರ ಛಾಯಾಗ್ರಹಣವಿದೆ. ಸುನೀಲ್ ಕಶ್ಯಪ್ ಸಂಕಲನ ಹಾಗೂ ವೆಂಕಟ್ ದೇವ್ ಅವರ ಸಹ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಫಣೀಶ್ ರಾಜ, ಸಂತೋಷ್ ನಾಯಕ್, ಅಭಿ ಕನಸಿನ ಕವನ ರಚಿಸಿದ್ದಾರೆ. ಸಂಭಾಷಣೆಯನ್ನು ನವೀನ್‌ಕೃಷ್ಣ ಬರೆದಿದ್ದಾರೆ.

#

ಇನ್ನಷ್ಟು ಓದಿರಿ

Scroll to Top