ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ `ವೀಕ್ ಎಂಡ್` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರವನ್ನು ನೀಡಿದೆ. ಚಿತ್ರ ಜೂನ್‍ನಲ್ಲಿ ರಿಲೀಸ್ ಆಗಲಿದೆ. ವೀಕ್ ಎಂಡ್ ಸಿನಿಮಾವನ್ನು ಶೃಂಗೇರಿ ಸುರೇಶ್ ನಿರ್ದೇಶನ ಮಾಡಿದ್ದು, ಶಶಿಧರ್ ಅವರ ಛಾಯಾಗ್ರಹಣವಿದೆ. ಇನ್ನು ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ ಚಿತ್ರಕ್ಕಿದೆ.

ವೀಕೆಂಡ್ ನಲ್ಲಿ ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿದ್ದು, ಸಂಜನಾ ಬುರ್ಲಿ ನಾಯಕಿಯಾಗಿ ಜತೆಯಾಗಿದ್ದಾರೆ. ಇನ್ನು ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.











































