ಅಭಿನಯ ಶಾರದೆಗೆ ಡಾ. ರಾಜ್ ಕುಮಾರ್ ದತ್ತಿ ಪ್ರಶಸ್ತಿ!

Picture of Cinibuzz

Cinibuzz

Bureau Report

ಪುಟ್ಟಣ್ಣ ಕಣಗಾಲ್ ಗರಡಿಯ ಹುಡುಗಿ ಹಿರಿಯ ನಟಿ ಜಯಂತಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಈ ಸಾಲಿನ ಡಾ. ರಾಜ್ ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೇ 24ರ ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ ಮಂದಿರ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಿತ್ರ ನಟ ಶಿವರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.  ಅಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡ ಭಾಗವಹಿಸಲಿದ್ದಾರೆ.

ಅಭಿನಯ ಶಾರದೆ ಎಂದು ಪ್ರಖ್ಯಾತರಾದ ಜಯಂತಿ ಅವರು ‘ಜೇನು ಗೂಡು’ ಚಿತ್ರದಿಂದ ಪ್ರಾರಂಭಿಸಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಮತ್ತು ಮರಾಠಿ ಭಾಷೆಗಳಲ್ಲಿ ಒಟ್ಟು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನು ಡಾ. ರಾಜಕುಮಾರ್ ಅವರ ಜೊತೆಯಲ್ಲೇ 35 ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಜಯಂತಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಮುಂದೆ ಅವರು ಕನ್ನಡದ ಚಿತ್ರರಂಗದ ಜನಪ್ರಿಯ ನಾಯಕರಾದ ರಾಜಕುಮಾರ್, ಉದಯಕುಮಾರ್, ಕಲ್ಯಾಣಕುಮಾರ್, ರಾಜೇಶ್ ಅವರೊಂದಿಗಷ್ಟೇ ಅಲ್ಲದೆ ನಂತರದ ತಲೆಮಾರಿನವರಾದ ವಿಷ್ಣುವರ್ಧನ್, ಶ್ರೀನಾಥ್ ಇನ್ನು ಅನೇಕ ಸ್ಟಾರ್ ಗಳ ಜತೆಗೆ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡಿದ್ದಾರೆ.

ಇನ್ನಷ್ಟು ಓದಿರಿ

Scroll to Top