ಜೋಶ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ ಜಗನ್ ಉರುಫ್ ಜಗನ್ನಾಥ್ ಚಂದ್ರಶೇಖರ್ ಗುರುವಾರ ದಾಂಪತ್ಯ ಜೀವಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ರಕ್ಷಿತಾ ಮುನಿಯಪ್ಪ ಜತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರೋಡ್ನಲ್ಲಿರುವ ಕನ್ವೆಂಷನ್ ಹಾಲ್ನಲ್ಲಿ ವಿವಾಹ ಸಮಾರಂಭ ನಡೆಯಿತು. ಮೂರು ವರ್ಷಗಳಿಂದ ಪ್ರಣಯ ಪಕ್ಷಿಗಳಾಗಿದ್ದ ಈ ಜೋಡಿಯ ಎಂಗೇಜ್ ಮೆಂಟ್ ಜನವರಿ 28ಕ್ಕೆ ನಡೆದಿತ್ತು. ಮೇ 26ರಂದು ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ನೇಹಿತರು, ಸಂಬಂಧಿಗಳು, ಕಿರುತೆರೆ ಹಾಗೂ ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ. ಕಿರುತೆರೆಯಲ್ಲಿ ಹೆಸರು ಮಾಡಿದ್ದ ಜಗನ್ ‘ಬಿಗ್ ಬಾಸ್ ಸೀಸನ್ 5’ರ ಸ್ಪರ್ಧಿಯಾಗಿ ಹೆಸರುಗಳಿಸಿದ್ದಾರೆ.
ಸೀತಾವಲ್ಲಭನ ವಿವಾಹವಾಯ್ತು!
Cinibuzz
Bureau Report
ಇನ್ನಷ್ಟು ಓದಿರಿ












































