ಈ ವಾರ ಅಮರ್ ರಿಲೀಸ್!

Picture of Cinibuzz

Cinibuzz

Bureau Report

ರೆಬೆಲ್‍ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಾಯಕರಾಗಿ ನಟಿಸಿರುವ ‘ಅಮರ್’ ಸಿನಿಮಾ ಈ ವಾರ ರಾಜ್ಯಾದ್ಯಾಂತ ಬಿಡುಗಡೆಯಾಗುತ್ತಿದೆ. ಸಂದೇಶ್ ಕಂಬೈನ್ಸ್ ಮೂಲಕ ಸಂದೇಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಹಿಂದೆ ಅಂಬರೀಶ್ ಅವರ ಅಭಿನಯಿಸಿದ ಸಾಕಷ್ಟು ಚಿತ್ರಗಳನ್ನು ಸಂದೇಶ್ ನಾಗರಾಜ್ ನಿರ್ಮಿಸಿದ್ದರು. ಅಮರ್ ಗೆ ಸಂಜು ವೆಡ್ಸ್ ಗೀತಾ ಖ್ಯಾತಿಯ ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿದ್ದಾರೆ. ಇನ್ನು ಅರ್ಜುನ್ ಜನ್ಮ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ, ಹರ್ಷ ಸಂಕಲನ, ಇಮ್ರಾನ್, ಧನಂಜಯ್, ಕಲೈ ನೃತ್ಯ ಸಂಯೋಜನೆ, ರವಿ ವರ್ಮ, ಥ್ರಿಲ್ಲರ್ ಮಂಜು ಸಾಹಸ ನಿರ್ದೆಶನ ಈ ಚಿತ್ರಕ್ಕಿದೆ.

ಸಿನಿಮಾ ತಾರಾಬಳಗದಲ್ಲಿ ಅಭಿಷೇಕ್ ಅಂಬರೀಶ್, ತಾನ್ಯಾ ಹೋಪ್, ಸುಧಾರಾಣಿ, ದೇವರಾಜ್, ದೀಪಕ್ ಶೆಟ್ಟಿ, ಅರುಣ್ ಸಾಗರ್, ಚಿಕ್ಕಣ್ಣ, ಸಾಧುಕೋಕಿಲ, ನಿರೂಪ್ ಭಂಡಾರಿ ಮುಂತಾದವರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಶೇಷ ಪಾತ್ರದಲ್ಲಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಬೆಂಗಳೂರು, ಮೈಸೂರು, ಮಡಿಕೇರಿ, ಮಂಗಳೂರು, ಮಣಿಪಾಲ, ಊಟಿ, ಕೇರಳ, ಕೊಯಮತ್ತೂರು, ಹಾಗೂ ಸಿಂಗಾಪುರ, ಸ್ವಿಜರ್ ಲ್ಯಾಂಡ್‍ನಲ್ಲೂ ಚಿತ್ರದ ಚಿತ್ರೀಕರಣವಾಗಿದೆ. ಅತಿ ಹೆಚ್ಚು ಲೊಕೇಶನ್‍ಗಳಲ್ಲಿ ಚಿತ್ರೀಕರಣಗೊಂಡಿರುವ ಚಿತ್ರ ಎಂಬ ಹೆಗ್ಗಳಿಕೆ ಅಮರ್ ಪಡೆದಿದೆ.

ಇನ್ನಷ್ಟು ಓದಿರಿ

Scroll to Top