ಭಾರತದಾದ್ಯಂತ ಭರವಸೆ ಮೂಡಿಸಿರುವ ಬಹುನಿರೀಕ್ಷಿತ ಕೆಜಿಎಫ್ ಸಿನಿಮಾ ಚಾಪ್ಟರ್ 2 ಚಿತ್ರೀಕರಣ ಈಗಾಗಲೇ ಆರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿದ್ದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿರಲಿಲ್ಲ. ಸುಮಲತಾ ಅವರ ಗೆಲುವಿನ ಖುಷಿಯಲ್ಲಿರುವ ಯಶ್ ಮುಂದಿನ ತಿಂಗಳ 6ರಿಮದ ಕೆಜಿಎಫ್ ಟೀಮ್ ಸೇರಲಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನ ಅಡಿಯಲ್ಲಿ ಕೆಜಿಎಫ್ 2 ತಯಾರಾಗುತ್ತಿದೆ. ಬಾಲಿವುಡ್ ನಟರಾದ ಸಂಜಯ್ ದತ್, ರವೀನಾ ಟಂಡನ್ ಈಗಾಗಲೇ ಕೆಜೆಎಫ್ ಬಳಗವನ್ನು ಸೇರಿದ್ದಾರೆ. ಈ ಹಿಂದೆ ಕೆಜಿಎಫ್ ನಲ್ಲಿ ನಾಯಕಿಯಾಗಿ ನಟಿಸಿದ್ದ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ವಶಿಷ್ಟ ಎನ್ ಸಿಂಹ ಕೂಡ ಚಾಪ್ಟರ್ 2ನಲ್ಲೂ ಮುಂದುವರೆಯಲಿದ್ದಾರೆ. ಪ್ರಶಾಂತ್ ನೀಲ್ ಕೆಜಿಎಫ್ ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ, ಶಿವಕುಮಾರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.











































