ಏಕ್ ಲವ್ ಯಾ ಚಿತ್ರದಲ್ಲಿ ಡಿಂಪಲ್ ಕ್ವೀನ್!

Picture of Cinibuzz

Cinibuzz

Bureau Report

ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಚಿತಾರಾಮ್. ಕೆಲ ಸಿನಿಮಾಗಳು ಬಿಡುಗಡೆಯ ಸ್ಟೇಜ್ ನಲ್ಲಿದೆ. ಮತ್ತೂ ಕೆಲವು ಸಿನಿಮಾಗಳ ಚಿತ್ರೀಕರಣದಲ್ಲಿ ರಚಿತಾ ತೊಡಗಿಕೊಂಡಿದ್ದಾರೆ. ಈ ಮಧ್ಯೆ ರಕ್ಷಿತಾ ಪ್ರೇಮ್ ಸಹೋದರ ನಟಿಸುತ್ತಿರುವ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ರಚಿತಾ ನಟಿಸುತ್ತಿದ್ದಾರೆ ಎನ್ನುವುದು ಕನ್ ಫರ್ಮ್ ಆಗಿದೆ.

ಹೌದು ಈ ಕುರಿತು ಅಧಿಕೃತ ಮಾಹಿತಿಯನ್ನು ನಿರ್ಮಾಪಕಿ ರಕ್ಷಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮೇ 20ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿತ್ರದ ಶೂಟಿಂಗ್​ಗೆ ಚಾಲನೆ ನೀಡಿದ್ದ ಪ್ರೇಮ್ ಮೊದಲ ಹಂತವಾಗಿ ಬೆಂಗಳೂರಿನಲ್ಲಿ ಸಾಹಸ ಸನ್ನಿವೇಶಗಳನ್ನು ಚಿತ್ರೀಕರಿಸಿದ್ದರು.

ಇನ್ನಷ್ಟು ಓದಿರಿ

Scroll to Top