ಶಂಕರಪುರದಲ್ಲಿ ನೆರವೇರಿತು `ರೇಮೊ’ ಸ್ಕ್ರಿಪ್ಟ್ ಪೂಜೆ!

Picture of Cinibuzz

Cinibuzz

Bureau Report

ರೋಗ್ ಖ್ಯಾತಿಯ ಇಶಾನ್ ಮತ್ತು ಗೂಗ್ಲಿ ಪವನ್ ಒಡೆಯರ್ ಕಾಂಬಿನೇಷನ್ನಿನ ಹೊಸ ಸಿನಿಮಾ ರೇಮೋ. ಈ ಚಿತ್ರವನ್ನು ಜೈ ಆದಿತ್ಯ ಫಿಲಂಸ್ ಲಾಂಛನದಲ್ಲಿ ಸಿ.ಆರ್. ಮನೋಹರ್ ನಿರ್ಮಿಸುತ್ತಿದ್ದಾರೆ. ಇತ್ತೀಚಿಗೆ ರೇಮೋ ಚಿತ್ರದ ಸ್ಕ್ರಿಪ್ಟ್ ಪೂಜೆ ಬೆಂಗಳೂರಿನ ಶಂಕರಪುರದಲ್ಲಿ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದರು. ಇಶಾನ್ ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಜತೆಯಾಗಿದ್ದಾರೆ. ಪ್ರಮುಖ ಪಾತ್ರದಲ್ಲಿ ಖ್ಯಾತ ನಟ ಶರತ್ ಕುಮಾರ್ ನಟಿಸುತ್ತಿದ್ದಾರೆ.

ಪವನ್ ಒಡೆಯರ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಜುಲೈನಲ್ಲಿ ಆರಂಭವಾಗಲಿದೆ. ಬೆಂಗಳೂರು, ಮೈಸೂರು, ಹೈದರಾಬಾದ್, ಲಂಡನ್, ಸಿಂಗಾಪುರ ಮುಂತಾದ ಕಡೆ ಚಿತ್ರಕ್ಕೆ 75 ದಿನಗಳ ಚಿತ್ರೀಕರಣ ನಡೆಯಲಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಎಸ್.ವೈದಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

 

ಇನ್ನಷ್ಟು ಓದಿರಿ

Scroll to Top