“ಭಾನು ವೆಡ್ಸ್ ಭೂಮಿ” ಯು/ಎ ಸರ್ಟಿಫಿಕೆಟ್

Picture of Cinibuzz

Cinibuzz

Bureau Report

ಪೂರ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕಿಶೋರ್ ಶೆಟ್ಟಿ ನಿರ್ಮಾಣದ `ಭಾನು ವೆಡ್ಸ್ ಭೂಮಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯಾವುದೇ ಕತ್ತರಿ ಪ್ರಯೋಗವಿಲ್ಲದೇ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಈ ಚಿತ್ರವನ್ನು ಜಿ.ಕೆ. ಆದಿ ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಯನ್ನಾಧರಿಸಿ ಈ ಚಿತ್ರವನ್ನು ಹೆಣೆಯಲಾಗಿದ್ದು, ಹಲವಾರು ತಿರುವು, ಮುರುವುಗಳಿವೆಯಂತೆ.

ಇನ್ನು ತಾರಾಂಗಣದಲ್ಲಿ ಸೂರ್ಯಪ್ರಭ್, ರಕ್ಷತಾ ಮಲ್ನಾಡ್. ಶೋಭರಾಜ್, ಗಿರೀಶ್, ಮೈಕೋ ಮಂಜು, ಸಿಲ್ವಾಮೂರ್ತಿ, ಹಂಸಾ, ಸೂರ್ಯಕಿರಣ್, ಪಲ್ಲವಿ ಶೆಟ್ಟಿ, ಹೆಚ್.ಎಂ.ಟಿ. ವಿಜಿ, ಪ್ರವೀಣ್, ಮಿಮಿಕ್ರಿ ರಾಜು, ಹಾಗೂ ವಿಶೇಷ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸುತ್ತಿದ್ದಾರೆ.  ಉಳಿದಂತೆ ಗಣೇಶ್ ಹೆಗ್ಡೆ ಛಾಯಾಗ್ರಹಣ, ಎ.ಎಂ. ನೀಲ್ ಸಂಗೀತ, ಶ್ರೀನಿವಾಸ್ ಪಿ ಬಾಬು ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಓದಿರಿ

Scroll to Top