ಸರ್ಕಾರಿ ಶಾಲೆ ದತ್ತು ಪಡೆದ ಡೈನಾಮಿಕ್ ಪ್ರಿನ್ಸ್!

Picture of Cinibuzz

Cinibuzz

Bureau Report

ಸೆಲೆಬ್ರೆಟಿಗಳು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಸಂಪ್ರದಾಯವನ್ನು ಹಂತ ಹಂತವಾಗಿ ಕಡಿತಗೊಳಿಸುತ್ತಿದ್ದಾರೆ. ಈಗಾಗಲೇ ಸುದೀಪ್, ದರ್ಶನ್, ಗಣೇಶ್ ಕೂಡ ಅದೇ ದಾರಿಯಲ್ಲಿದ್ದಾರೆ. ಜನ್ಮದಿನವನ್ನು ಆಚರಿಸಿಕೊಳ್ಳದೇ ಆಹಾರ ಸಾಮಾಗ್ರಿಗಳನ್ನು ಅಭಿಮಾನಿಗಳಿಂದ ಕಲೆಕ್ಟ್ ಮಾಡಿಕೊಂಡು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಹಂಚುವ ಮೂಲಕ ಮಾನವೀಯತೆಯನ್ನು ಮೆರೆಯುತ್ತಿದ್ದಾರೆ. ಇದೀಗ ಡೈನಾಮಿಕ್ ಪ್ರಿನ್ಸ್ ಕೂಡ ಅದೇ ದಾರಿಯಲ್ಲಿದ್ದಾರೆ.

ಮುಂದಿನ ತಿಂಗಳು ಅವರ ಜನ್ಮದಿನವಿದೆ. ಆದರೆ ಅದಕ್ಕಾಗಿ ವ್ಯಯಿಸುವ ಹಣವನ್ನು ಬಡಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ನೆರವಾಗಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದರ ಜತೆಗೆ ಉತ್ತರ ಕರ್ನಾಟಕದ ಸರ್ಕಾರಿ ಶಾಲೆಯೊಂದನ್ನು ಅವರು ದತ್ತು ಪಡೆದುಕೊಂಡಿದ್ದಾರೆ. ಅಲ್ಲದೇ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್​ಬುಕ್ಸ್ ಸೇರಿ ವಿದ್ಯಾಭ್ಯಾಸಕ್ಕೆ ಬೇಕಾದ ವಸ್ತುಗಳನ್ನು ನೀಡುವುದಕ್ಕೂ ಮನವಿ ಮಾಡಿದ್ದಾರೆ.

ಇನ್ನಷ್ಟು ಓದಿರಿ

Scroll to Top