ನಟ ತೇಜಸ್ ಗೌಡ ಮೇಲೆ ಅತ್ಯಾಚಾರ ಪ್ರಕರಣ ದಾಖಲು!

Picture of Cinibuzz

Cinibuzz

Bureau Report

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರವಾಹಿಯಲ್ಲಿ ನಟಿಸುತ್ತಿರುವ ಹಾಗೂ ಪ್ರೊಡಕ್ಷನ್ ಮ್ಯಾನೇಜರ್ ತೇಜಸ್ ಗೌಡ ಉರುಫ್ ಅಭಿಗೌಡ ವಿರುದ್ಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂದಿಸಿ ವಿಚಾರಣೆ ನಡೆಸಿದ್ದಾರೆ.

2012ರಲ್ಲಿ ಚಿಕ್ಕಬಳ್ಳಾಪುರ ಹೊರವಲಯದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದಾಗ ತನ್ನ ಸಹಪಾಠಿ ತೇಜಸ್ ಗೌಡ ಪ್ರೀತಿಸುವುದಾಗತಿ ನಂಬಿಸಿ, ತನ್ನ ಇಚ್ಚೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದಾನೆ. ಇದನ್ನು ವಿರೋಧಿಸಿದಕ್ಕೆ ನಿನ್ನನ್ನು ಮದುವೆಯಾಗುತ್ತೇನೆ ಎಂದು ಅನೇಕ ಬಾರಿ ಲೈಂಗಿಕ ಸಂಪರ್ಕವನ್ನು ಮಾಡಿದ್ದಾನೆಂದು ಸಂತ್ರಸ್ಥೆ ದೂರು ನೀಡಿದ್ದು, ಮದುವೆಯಾಗುತ್ತಾನೆಂದು ಇಷ್ಟು ದಿನ ಸುಮ್ಮನಿದ್ದು, ಈಗ ಆತ ಬೇರೆ ಹುಡುಗಿಯನ್ನು ಮದುವೆಯಾಗುವುದಾಗಿ ತಿಳಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top