ಗಾಯಕ ಯೋ ಯೋ ಹನಿ ಸಿಂಗ್ ವಿರುದ್ಧ ದೂರು !

Picture of Cinibuzz

Cinibuzz

Bureau Report

ಫೇಮಸ್ ಸಿಂಗರ್ ಯೋ ಯೋ ಹನಿ ಸಿಂಗ್ ಅವರು ತಮ್ಮ ಮಾಖ್ನಾ ಹಾಡಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯವನ್ನು ಬಳಕೆ ಮಾಡಿರುವ ಆರೋಪದ ಮೇಲೆ ಪಂಜಾಬ್ ರಾಜ್ಯ ಮಹಿಳಾ ಆಯೋಗ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದೆ.

ಹನಿ ವಿಂಗ್ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ರಾಜ್ಯ ಗೃಹ ಕಾರ್ಯದರ್ಶಿ, ಪಂಜಾಬ್ ಪೊಲೀಸ್ ಮಹಾ ನಿರ್ದೇಶಕ ಮತ್ತು ಐಜಿಪಿ ಅವರಿಗೆ ಮಹಿಳೆಯರನ್ನು ಲೈಂಗಿಕವಾಗಿ ಅವಮಾನಿಸುವ ಕೀಳು ಮಟ್ಟದ ಸಾಹಿತ್ಯವನ್ನು ತನ್ನ ಹಾಡಿನಲ್ಲಿ ಬಳಸಿಕೊಂಡಿರುವ ಕುರಿತು ಪತ್ರ ಬರೆದಿರುವ ಅವರು, ಹನಿ ಸಿಂಗ್ ವಿರುದ್ಧ ದೂರು ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top