ವಿಜಯ್ ದೇವರಕೊಂಡ ಅಭಿನಯದ ತೆಲುಗಿನ ಬ್ಲಾಕ್ ಬಸ್ಟರ್ ಸಿನಿಮಾ ಅರ್ಜುನ್ ರೆಡ್ಡಿಯ ರಿಮೇಕ್ ಬಾಲಿವುಡ್ ನ ಬಹುನಿರೀಕ್ಷಿತ ಕಬೀರ್ ಸಿಂಗ್ ಬಾಕ್ಸ್ ಆಫೀಸಿನಲ್ಲಿ ದಾಖಲೆಯ ಕಲೆಕ್ಷನ್ ಮಾಡಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಸಿನಿಮಾ ಬಿಡುಗಡೆಗೊಂಡು ಎರಡು ವಾರ ಕಳೆದರೂ ಸಹ ಕಬೀರ್ ಸಿಂಗ್ ಪ್ರೇಕ್ಷಕರನ್ನು ಥಿಯೇಟರ್ ನತ್ತ ಸೆಳೆಯುವಲ್ಲಿಯೂ ಯಶಸ್ವಿಯಾಗಿದೆ.

ವಿಕ್ಕಿ ಕೌಶಲ್ ಅಭಿನಯದ ಉರಿ ಸಿನಿಮಾ ಹಾಗೂ ಸಲ್ಮಾನ್ ಖಾನ್ ನಟನೆಯ ಭಾರತ್ ಚಿತ್ರವನ್ನು ಮೂರನೇ ವಾರದಲ್ಲಿ ಕಬೀರ್ ಸಿಂಗ್ ಹಿಂದಿಕ್ಕಿ ದಾಖಲೆ ಬರೆದಿದೆ. ಕಬೀರ್ ಸಿಂಗ್ ಚಿತ್ರವನ್ನು ಸಂದೀಪ್ ವಂಗಾ ರೆಡ್ಡಿ ನಿರ್ದೇಶನ ಮಾಡಿದ್ದು, ಮುರಾದ್ ಕೇತಾನಿ ಮತ್ತು ಅಶ‍್ವಿನ್ ವರ್ದೆ ನಿರ್ಮಾಣ ಮಾಡಿದ್ದಾರೆ. ಇನ್ನು ಶಾಹಿದ್ ಕಪೂರ್ ಹಾಗೂ ಕಿಯಾರಾ ಪ್ರಮುಖ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.











































