ದರ್ಶನ್ ಗೆ ಒಲಿದು ಬಂದ ಹೊಸ ಟೈಟಲ್ಲು!

Picture of Cinibuzz

Cinibuzz

Bureau Report

ಸ್ಯಾಂಡಲ್ ವುಡ್ ನಲ್ಲಿ ಡಾ. ರಾಜ್ ಕುಮಾರ್ ಅವರನ್ನು ಬಿಟ್ಟರೇ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವವಾಗಿ ಅಬ್ಬರಿಸುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್. ಡಾ. ರಾಜ್ ಕುಮಾರ್ ಅಭಿಮಾನಿ ದೇವ್ರು ಅಂತ ಕರೆದ್ರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳನ್ನು ಸೆಲೆಬ್ರೆಟಿಗಳು ಎಂದು ಕರೆದವರು.

ಈಗಾಗಲೇ ಸ್ಯಾಂಡಲ್ ವುಡ್ ಏಕ ಚಕ್ರಾಧಿಪತಿ, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ಹೀಗೆ ಸಾಕಷ್ಟು ಹೆಸರುಗಳಿಂದ ಜನಮನ ಗೆದ್ದಿರುವ ದರ್ಶನ್ ಪಾಲಿಗೆ ಹೊಸ ಹೆಸರು ಸೇರ್ಪಡೆಯಾಗಿದೆ. ಇತ್ತೀಚಿಗೆ ಕುರುಕ್ಷೇತ್ರ ಚಿತ್ರದ ಆಡಿಯೋವನ್ನು ಅಭಿಮಾನಿಗಳಿಂದಲೇ ರಿಲೀಸ್ ಮಾಡಿಸುವ ಮೂಲಕ ಅಭಿಮಾನಿಗಳ ಮೇಲಿನ ಪ್ರೀತಿ, ಗೌರವವನ್ನು ಮತ್ತೊಮ್ಮೆ ಫ್ರೂವ್ ಮಾಡಿದ್ದಾರೆ. ಅಭಿಮಾನಿಗಳ ಜತೆ ಸದಾ ಸಂಪರ್ಕದಲ್ಲಿರುವ ಚಂದನವನದ ಯಜಮಾನನಿಗೆ ಸುಲ್ತಾನ್ ಆಫ್ ಸ್ಯಾಂಡಲ್ ವುಡ್ ಎಂಬ ಬಿರುದನ್ನು ನೀಡಿದ್ದಾರೆ. ಹಾಗಂತ ಈ ಟೈಟಲನ್ನು ಅಭಿಮಾನಿಗಳೇನೂ ಕೊಟ್ಟಿದಲ್ಲ. ಸಿಂಗ ಚಿತ್ರದ ಆಡಿಯೋ ಬಿಡುಗಡೆಗೆ ದರ್ಶನ್ ಹೋಗಿದ್ದ ಸಂದರ್ಭದಲ್ಲಿ ಹಿರಿಯ ನಟಿ ತಾರಾ ಅನುರಾಧ ಅವರು ನೀಡಿದ್ದಂತೆ. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅವರ ಕುರಿತಾಗಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಇನ್ನಷ್ಟು ಓದಿರಿ

Scroll to Top