ಟ್ರೆಂಡಿಂಗ್ ನಲ್ಲಿದೆ ಕುರುಕ್ಷೇತ್ರದ ಟ್ರೇಲರ್!

Picture of Cinibuzz

Cinibuzz

Bureau Report

ಕನ್ನಡಿಗರು ಬಹಳಷ್ಟು ನಿರೀಕ್ಷೆಯಿಂದ ಕಾಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಕುರುಕ್ಷೇತ್ರ. ನಾನಾ ವಿಚಾರಗಳಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿರುವ ಈ ಚಿತ್ರದ ಟ್ರೇಲರ್ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಹಿಟ್ಸ್ ಪಡೆದ ಟ್ರೇಲರ್ ಎಂದೂ ಸಹ ಖ್ಯಾತಿಯಾಗಿದೆ. ದುರ್ಯೋದನನಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರಿಸಿದ್ದು, ಪಾಂಡವರು ಮತ್ತು ಕೌರವರ ನಡುವಿನ ಅಂತಿಮ ಹಣಾಹಣಿಯ ಕಥಾಹಂದರವನ್ನು 3ಡಿ ತಂತ್ರಜ್ಞಾನದಲ್ಲಿ ಹೇಳಲಾಗುತ್ತಿದೆ.

ಈ ಚಿತ್ರವು ಬಹುಕೋಟಿ ವೆಚ್ಚದ ಹಾಗೂ ಬಹುಭಾಷೆಯ ಕನ್ನಡದ ದುಬಾರಿ ಸಿನಿಮಾ ಎಂಬ ಖ್ಯಾತಿಯನ್ನು ಗಳಿಸಿದೆ. ಈ ಸಿನಿಮಾವನ್ನು ಮುನಿರತ್ನ ನಿರ್ಮಾಣ ಮಾಡಿದ್ದು, ನಾಗಣ್ಣ, ವಿ ನಾಗೇಂದ್ರ ಪ್ರಸಾದ್, ಎಸ್ ವಿ ಪ್ರಸಾದ್ ಹಾಗೂ ದೇವರಾಜ್ ಸಿನಿಮಾಗೆ ನಾಲ್ಕು ನಿರ್ದೇಶಕರು ಕೆಲಸ ಮಾಡಿದ್ದಾರೆ. ಇನ್ನು ಚಿತ್ರದ ತಾರಾಂಗಣದಲ್ಲಿ ರೆಬಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್, ಸ್ನೇಹ, ಸೋನು ಸೂದ್, ರವಿಶಂಕರ್, ಹರಿಪ್ರಿಯ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಸೇರಿದಂತೆ ಬಹುದೊಡ್ಡ ತಾರಾಂಗಣವೇ ಇದೆ. ಇನ್ನು ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ. ಮುಂದಿನ ತಿಂಗಳು ಕುರುಕ್ಷೇತ್ರ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಓದಿರಿ

Scroll to Top