ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಬಿಡುಗಡೆಗೆ ಕಾಲ ಸನ್ನಿಹಿತವಾಗುತ್ತಿದೆ. ಈಗಾಗಲೇ ನಿರ್ಮಾಪಕರು ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾವನ್ನು ರಿಲೀಸ್ ಮಾಡುವುದಾಗಿಯೂ ಅನೌನ್ಸ್ ಮಾಡಿದ್ದಾರೆ. ಅದಕ್ಕೂ ಮೊದಲು ಪೈಲ್ವಾನ್ ಹಾಡುಗಳನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಅದಕ್ಕಾಗಿ ಕೋಟೆ ನಾಡಿನಲ್ಲಿ ಸಿದ್ದತೆ ನಡೆಸಲಾಗಿದೆಯಂತೆ.

ಜುಲೈ 27ರಂದು ಆಡಿಯೋ ಬಿಡುಗಡೆಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಪೈಲ್ವಾನ್ ಥೀಮ್ ಸಾಂಗೊಂದನ್ನು ಬಿಡುಗಡೆ ಮಾಡಲು ನಿರ್ದೇಶಕರು ನಿರ್ಧರಿಸಿದ್ದು, ಶೀಘ್ರದಲ್ಲಿಯೇ ದಿನಾಂಕವನ್ನು ಪ್ರಕಟಿಸಲಿದ್ದಾರೆ. ಪಂಚ ಭಾಷೆಗಳಲ್ಲಿ ಪೈಲ್ವಾನ್ ರಿಲೀಸ್ ಆಗಲಿದ್ದು, ಆಯಾ ರಾಜ್ಯಗಳಲ್ಲಿ ಆಡಿಯೋ ಬಿಡುಗಡೆ ಮಾಡಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ಲಹರಿ ಆಡಿಯೋ ಮೂಲಕ ಪೈಲ್ವಾನ್ ಹಾಡುಗಳು ಅನಾವರಣಗೊಳ್ಳಲಿದೆ.











































