ಪವರ್ ಸ್ಟಾರ್ ಹುಚ್ಚನ ಪಾತ್ರ ಮಾಡ್ಬೇಕಂತೆ!

Picture of Cinibuzz

Cinibuzz

Bureau Report

ಬಾಲ್ಯದಿಂದಲೂ ವೈವಿಧ್ಯಮಯ ಪಾತ್ರಗಳನ್ನು ಮಾಡುತ್ತಲೇ ಬಂದಿರುವ ಪುನೀತ್ ರಾಜ್ ಕುಮಾರ್ ಅವರಿಗೆ ವಿಭಿನ್ನ ಪಾತ್ರಗಳಲ್ಲಿ ನಟಿಸುವುದೆಂದರೆ ಬಹಳ ಇಷ್ಟ ಎಂದು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಪರ್ಧಿಯೊಬ್ಬರು ನಿಮಗೆ ಒಮ್ಮೆಯಾದರೂ ವಿಭಿನ್ನ ರೀತಿಯ ಸಿನಿಮಾದಲ್ಲಿ ಅಭಿನಯಿಸಬೇಕೆಂದು ಅನ್ನಿಸಲಿಲ್ಲವೇ ಎಂಬ ಪ್ರಶ್ನೆಯನ್ನು ಕೇಳಿದರು.

ಅದಕ್ಕೆ ಉತ್ತರಿಸಿದ ಪುನೀತ್ ರಾಜ್ ಕುಮಾರ್, ಒಬ್ಬ ನಟನಾಗಿ ಭಿನ್ನ ಭಿನ್ನ ಪಾತ್ರಗಳಲ್ಲಿ ಅಭಿನಯಿಸಲು ಆಸಕ್ತಿ ಇರುತ್ತದೆ. ನನಗೆ ಹುಚ್ಚನ ಪಾತ್ರ , ವಿಲನ್ ಪಾತ್ರ ಮತ್ತು ಎಕ್ಸ್‌ಪೆರಿಮೆಂಟಲ್ ಪಾತ್ರಗಳಲ್ಲಿ ಅಭಿನಯಿಸುವ ಆಸಕ್ತಿ ಇರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top