ನಾಳೆ ಪೈಲ್ವಾನ್ ರೊಮ್ಯಾಂಟಿಕ್ ಸಾಂಗ್ ರಿಲೀಸ್!

Picture of Cinibuzz

Cinibuzz

Bureau Report

ಕಿಚ್ಚ ಸುದೀಪ್ ಮತ್ತು ಹೆಬ್ಬುಲಿ ಕೃಷ್ಣ ಕಾಂಬಿನೇಷನ್ನಿನ ಪೈಲ್ವಾನ್ ಸಿನಿಮಾ ಈಗಾಗಲೇ ಭಾರತದಾದ್ಯಂತ ಸದ್ದು ಮಾಡುತ್ತಿದೆ. ಈಗಾಗಲೇ ಪೈಲ್ವಾನಿನ ಥೀಮ್ ಸಾಂಗ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಒಂದು ಮಿಲಿಯನ್ ಗೂ ಅಧಿಕ ಹಿಟ್ಸ್ ಪಡೆದುಕೊಂಡು ಟ್ರೆಂಡಿಂಗ್ ನಲ್ಲಿದೆ.

ಪೈಲ್ವಾನ್ ಸದ್ಯ ಎರಡನೇ ಹಾಡನ್ನು ರಿಲೀಸ್ ಮಾಡಲು ಡಿಸೈಡ್ ಮಾಡಿದೆ. ಹೌದು ಪೈಲ್ವಾನ್ ಚಿತ್ರದ ರೊಮ್ಯಾಂಟಿಕ್ ಹಾಡು ನಾಳೆ ಮಧ್ಯಾಹ್ನ 03.06ಕ್ಕೆ ಬಿಡುಗಡೆಯಾಗಲಿದೆ. ಕಣ್ಮಣಿಯೇ.. ಎಂಬ ಹಾಡು ಇದಾಗಿದ್ದು, ವಿ ನಾಗೇಂದ್ರ ಪ್ರಸಾದ್ ಬರೆದಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಂದಹಾಗೆ ಕೃಷ್ಣ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಸುದೀಪ್ ಮತ್ತು ಆಕಾಂಕ್ಷ ಸಿಂಗ್ ಪ್ರಧಾನ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನ ಸುನೀಲ್ ಶೆಟ್ಟಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲೆಯಾಳಂ ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.

ಇನ್ನಷ್ಟು ಓದಿರಿ

Scroll to Top