ವರ್ಷದ ಲಾಭದಾಯಕ ಸಿನಿಮಾ ಕಬೀರ್ ಸಿಂಗ್!

Picture of Cinibuzz

Cinibuzz

Bureau Report

ಶಾಯಿದ್ ಕಪೂರ್ ಮತ್ತು ಕಿಯಾರ ಅಡ್ವಾನಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಸಿನಿಮಾ ಕಬೀರ್ ಸಿಂಗ್. ಬಿಡುಗಡೆಯಾಗಿ ತಿಂಗಳಾದರೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಕಬೀರ್ ಸಿಂಗ್ ಬರೋಬ್ಬರಿ 250 ಕೋಟಿ ಕಲೆಕ್ಷನ್ ಮಾಡುವ ಮೂಲಕ ವರ್ಷದ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಲ್ಲದೇ ಒಟ್ಟಾಗಿ 252. 14 ಕೋಟಿ ಕಲೆಕ್ಷನ್ ಮಾಡುವ ಮೂಲಕ 250 ಕೋಟಿ ಕ್ಲಬ್ ಸೇರಿದೆ. ಶಾಯಿದ್ ಕಪೂರ್ ಅಭಿಯನದ ಈ ಚಿತ್ರ ಬಿಡುಗಡೆಯಾದ ಮೊದಲ ದಿನವೇ  20.21  ಕೋಟಿ ಕಲೆಕ್ಷನ್ ಮಾಡಿತ್ತು. ಭಾರತೀಯ ಚಿತ್ರೋದ್ಯಮ ವಿಶ್ಲೇಷಕ ತರಣ್ ಆದರ್ಶ್ ಟ್ವಿಟರ್ ನಲ್ಲಿ  ಕಬೀರ್ ಸಿಂಗ್ ಬಾಕ್ಸ್ ಆಫೀಸ್  ಕಲೆಕ್ಷನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ಕೂಡ.

ಇತ್ತೀಚಿಗೆ ಬಿಡುಗಡೆಯಾದ ‘ಸೂಪರ್ 30’  ಅರ್ಟಿಕಲ್ 15 ಚಿತ್ರಗಳ ತೀವ್ರ ಪೈಪೋಟಿಯ ನಡುವೆಯೂ ಕಬೀರ್ ಸಿಂಗ್ ಚಿತ್ರ ಉತ್ತಮ ಆದಾಯ ಮಾಡಿದೆ. ಕಬೀರ್ ಸಿಂಗ್ ತೆಲುಗಿನ ಅರ್ಜುನ್ ರೆಡ್ಡಿ ಸಿನಿಮಾದ ರಿಮೇಕ್ ಆಗಿದೆ. ಮೂಲ ಚಿತ್ರದಲ್ಲಿ ವಿಜಯ್ ದೇವರಕೊಂಡ ಹಾಗೂ ಶಾಲಿನಿ ಪಾಂಡೆ ಅಭಿನಯಿಸಿದ್ದಾರೆ.  ಮುಂಗೋಪಿ ನಾಯಕ ತನ್ನ ಪ್ರೇಯಸಿಯನ್ನು ಮದುವೆಯಾಗಲು ಸಾಧ್ಯವಾಗದಿದ್ದಾಗ ಮದ್ಯ, ಮಾದಕ ವ್ಯಸನಿಯಾಗಿ ಬದುಕನ್ನು ಹಾಳು ಮಾಡಿಕೊಳ್ಳುವುದೇ ಚಿತ್ರದ ಒಂದೆಳೆಯಾಗಿದೆ.

ಇನ್ನಷ್ಟು ಓದಿರಿ

Scroll to Top