ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಡೇಟ್ ಫಿಕ್ಸ್!

Picture of Cinibuzz

Cinibuzz

Bureau Report

ಒಂದು ಮೊಟ್ಟೆ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ ನಟಿಸಿರುವ ಗುಬ್ಬಿ ಮೇಲೆ ಬ್ರಹ್ಮಾಸ್ಟ್ರ ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಹೌದು.. ಈ ಚಿತ್ರವನ್ನು ಮುಂದಿನ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಚಿತ್ರವನ್ನು ಕ್ರಿಸ್ಟಲ್ ಪಾರ್ಕ್ ಸಿನಿಮಾ ಬ್ಯಾನರ್ ನಿಂದ ನಿರ್ಮಾಣವಾಗಿದ್ದು, ಸುಜಯ್ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ.

ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದ್ದು, ಪ್ರಮೋದ್ ಶೆಟ್ಟಿ ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಾಫ್ಟ್ ವೇರ್ ಎಂಜಿನಿಯರ್ ಆದ ನಂತರ ಮದುವೆಯಾಗಲು ಹುಡುಗಿಯ ಹುಡುಕಾಟದಲ್ಲಿರುವ ಯುವಕನ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನು ಲಕ್ಷ್ಮೀ ಬಾರಮ್ಮ ಖ್ಯಾತಿಯ ಕವಿತಾ ಗೌಡ ನಾಯಕಿಯಾಗಿ ಜತೆಯಾಗಿದ್ದಾರೆ.

ಇನ್ನಷ್ಟು ಓದಿರಿ

Scroll to Top