ಅರುಣಿಮಾ ಘೋಷ್ ವಿರುದ್ಧ ಅಶ್ಲೀಲ ಪದ ಬಳಕೆ ವ್ಯಕ್ತಿ ಬಂಧನ!

Picture of Cinibuzz

Cinibuzz

Bureau Report

ಬಂಗಾಲಿ ಚಿತ್ರನಟಿ ಅರುಣಿಮಾ ಘೋಷ್ ವಿರುದ್ಧ ಅಶ್ಲೀಲ ಪದ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಖ್ಯಾತ ಚಿತ್ರನಟಿ ಅರುಣಿಮಾ ಘೋಷ್ ನೀಡಿರುವ ದೂರಿನ ಅನ್ವಯ ದಕ್ಷಿಣ ಕೋಲ್ಕತಾದ ಗಾರ್ಫಾ ಪ್ರದೇಶದ ನಿವಾಸಿ ಮುಖೇಶ್ ಶಾ ಎಂಬಾತನನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.

ಮೇ 30ರಿಂದ ನಟಿಯ ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಅಶ್ಲೀಲ ಕಮೆಂಟ್ ಹಾಕಿ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ಮುಖೇಶ್ ಮೇಯುಖ್ ಹೆಸರಿನ ನಕಲಿ ಖಾತೆ ತೆರೆದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಯಾವ ಕಾರಣಕ್ಕಾಗಿ ಇದೆನ್ನೆಲ್ಲಾ ಮಾಡಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆತ ಮಾನಸಿಕವಾಗಿ ಆರೋಗ್ಯವಾಗಿದ್ದಾನೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top