ಇಂಡಿಯನ್ 2 ಚಿತ್ರಕ್ಕೆ ರಾಕುಲ್ ಪ್ರೀತ್ ಸಿಂಗ್!

Picture of Cinibuzz

Cinibuzz

Bureau Report

ಕಮಲ್ ಹಾಸನ್ ನಟನೆಯ ಇಂಡಿಯನ್ 2 ಸಿನಿಮಾದಲ್ಲಿ  ನಟಿ ರಕುಲ್ ಪ್ರೀತ್ ಸಿಂಗ್ ಕೂಡಾ ನಟಿಸಲಿರುವುದು ಪಕ್ಕಾ ಆಗಿದೆ. ಅದರಲ್ಲಿ ಅವರು ನಟ ಸಿದ್ಧಾರ್ಥ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿದ್ಧಾರ್ಥ್ ಅವರು ಈ ಸಿನಿಮಾದಲ್ಲಿ ಕಮಲ್ ಹಾಸನ್ ರ ಮೊಮ್ಮಗನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನು ಕಾಜಲ್ ಅಗರ್ವಾಲ್ ಕೂಡಾ ನಟಿಸುತ್ತಿರುವ ಇಂಡಿಯನ್ 2 ಸಿನಿಮಾದಲ್ಲಿ ಪ್ರಿಯಾ ಶಂಕರ್, ವಿದ್ಯುತ್ ಜಮ್ವಾಲ್ ಇತರರಿದ್ದಾರೆ. ಈ ಚಿತ್ರದ 3ನೇ ಹಂತದ ಚಿತ್ರೀಕರಣ ಆಗಸ್ಟ್ ನಿಂದ ಆರಂಭವಾಗಲಿದೆ. ಎಲ್ಲ ಅಂದುಕೊಂಡಂತಾದರೆ ಈ ಚಿತ್ರ 2021ರಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಓದಿರಿ

Scroll to Top