ರೊಮ್ಯಾಂಟಿಕ್ ಮೂಡ್ ನ ಕುರುಕ್ಷೇತ್ರ ಅಭಿಮನ್ಯು ಹಾಡು ರಿಲೀಸ್!

Picture of Cinibuzz

Cinibuzz

Bureau Report

ಇತ್ತೀಚಿಗಷ್ಟೇ ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ ತಮ್ಮ ಕುರುಕ್ಷೇತ್ರ ಅಭಿಮನ್ಯು ಪಾತ್ರದ ಡಬ್ಬಿಂಗ್ ಮುಗಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅಭಿಮನ್ಯು ಮತ್ತು ಉತ್ತರೆ ನಡುವಿನ ಸಾಂಗ್ ರಿಲೀಸ್ ಆಗಿದೆ. ಹಾಡಿನಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅದಿತಿ ಆರ್ಯ ತೀರ ಆಪ್ತವಾಗಿ ರೊಮ್ಯಾಂಟಿಕ್ ಮೂಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ವಿ ನಾಗೇಂದ್ರ ಪ್ರಸಾದ್ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೇಯಾ ಘೋಷಾಲ್ ಹಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ.

ಸ್ಯಾಂಡಲ್ ವುಡ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಕುರುಕ್ಷೇತ್ರ. ಈಗಾಗಲೇ ಸಾಕಷ್ಟು ಹೈಪ್ ಸೃಷ್ಟಿಸಿರುವ ಕುರುಕ್ಷೇತ್ರ ಕಾರಣಾಂತರಗಳಿಂದ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುತ್ತಲೇ ಇತ್ತು. ನಾಳೆ ರಿಲೀಸ್ ಆಗಬೇಕಿದ್ದ ಕುರುಕ್ಷೇತ್ರ ಚಿತ್ರವನ್ನು ಆಗಸ್ಟ್ 9ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದ್ದು ವರಮಹಾಲಕ್ಷ್ಮಿ ಹಬ್ಬಕ್ಕೆ ಕುರುಕ್ಷೇತ್ರ ತೆರೆ ಕಾಣುವ ಸಾಧ್ಯತೆ ಇದೆ. ಬಹುತಾರಾಗಣದಿಂದ ಕೂಡಿರುವ ಕುರುಕ್ಷೇತ್ರ ಚಿತ್ರವನ್ನು ಮುನಿರತ್ನ ನಿರ್ಮಾಣ ಮಾಡಿದ್ದು, ನಾಗಣ್ಣ ಸೇರಿದಂತೆ ಬಹುತೇಕರು ಕುರುಕ್ಷೇತ್ರವನ್ನು ನಿರ್ದೇಶನ ಮಾಡಿದ್ದಾರೆ.

***

ಇನ್ನಷ್ಟು ಓದಿರಿ

Scroll to Top