ಪ್ರಿನ್ಸ್ ಮಹೇಶ್ `ಸರಿಲೇರು ನೀಕೆವ್ವರು’ ಟೀಸರ್ ಬಿಡುಗಡೆ!

Picture of Cinibuzz

Cinibuzz

Bureau Report

ಮಹರ್ಷಿ ಚಿತ್ರದ ಯಶಸ್ಸಿನ ನಂತರ ತೆಲುಗಿನ ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ನಟಿಸುತ್ತಿರುವ ಹೊಸ ಸಿನಿಮಾ ಸರಿಲೇರು ನೀಕೆವ್ವರು. ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಸರಿಲೇರು ನೀಕೆವ್ವರು ಚಿತ್ರದ ಟೀಸರ್ ವಿಡಿಯೋ ಬಿಡುಗಡೆಗೊಳಿಸಿದ್ದು, ಚಿತ್ರದಲ್ಲಿ ಮಹೇಶ್ ಬಾಬು ಸೇನಾ ಕಮಾಂಡರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮಹೇಶ್ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಪ್ರಮುಖ ಪಾತ್ರದಲ್ಲಿ ಹಿರಿಯನಟಿ ವಿಜಯಶಾಂತಿ ಅಭಿನಯಿಸುತ್ತಿದ್ದಾರೆ.

ಎಲ್ಲ ಅಂದುಕೊಂಡಂತೆ ಆದರೆ ಸರಿಲೇರು ನೀಕೆವ್ವರು ಸಿನಿಮಾ 2020ರ ಸಂಕ್ರಾತಿಗೆ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದು, ಎಕೆ ಎಂಟರ್‌ಟೈನ್‌ಮೆಂಟ್ಸ್, ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಮತ್ತು ಜಿ.ಮಹೇಶ್ ಬಾಬು ಎಂಟರ್‌ಟೈನ್‌ಮೆಂಟ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಓದಿರಿ

Scroll to Top