ಆಡಿಯೋ ರಿಲೀಸ್ ಸ್ಥಳ ಶಿಫ್ಟ್ ಮಾಡಿಕೊಂಡ ಪೈಲ್ವಾನ್!

Picture of Cinibuzz

Cinibuzz

Bureau Report

ಎಲ್ಲ ಅಂದುಕೊಂಡಂತಾಗಿದ್ದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಆಗಸ್ಟ್ 9ರಂದು ಪೈಲ್ವಾನ್ ಆಡಿಯೋ ಕೋಟೆ ನಾಡಿನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಉತ್ತರ ಕರ್ನಾಟಕದಲ್ಲಿ ನೆರೆ ಪ್ರವಾಹ ಪರಿಸ್ಥಿತಿಗೆ ಮನನೊಂದು ಪೈಲ್ವಾನ್ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಂಡಿತ್ತು. ಈ ವಿಚಾರವನ್ನು ಸ್ವತಃ ಸುದೀಪ್ ಅವರೇ ತಿಳಿಸಿದ್ದರು

ಸದ್ಯ ಪೈಲ್ವಾನ್ ಹೊಸ ವಿಚಾರವನ್ನು ರಿವೀಲ್ ಮಾಡಿದೆ. ಈ ಮೊದಲು ಚಿತ್ರದುರ್ಗದಲ್ಲಿ ಬಿಡುಗಡೆ ಮಾಡಬೇಕೆಂದು ಡಿಸೈಡ್ ಮಾಡಿದ್ದ ಚಿತ್ರತಂಡ ಇದೀಗ ಕಾರ್ಯಕ್ರಮವನ್ನು ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದೇ ಭಾನುವಾರ ಆಗಸ್ಟ್ 18ರಂದು ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಸರಳವಾಗಿ ಆಡಿಯೋ ಕಾರ್ಯಕ್ರಮವನ್ನು ನೆರವೇರಿಸಲಾಗುವುದಂತೆ. ಅಲ್ಲದೇ ಆಯ್ದ ಕೆಲವೇ ಮಂದಿಯನ್ನು ಆಡಿಯೋ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಪೈಲ್ವಾನ್ ಚಿತ್ರವು ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರವಾಗಿದ್ದು, ಆಕಾಂಕ್ಷ ಸಿಂಗ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಲ್ಲದೇ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ಹೆಬ್ಬುಲಿ ಕೃಷ್ಣ ಪೈಲ್ವಾನ್ ಚಿತ್ರದ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದು, ಸೆಪ್ಟೆಂಬರ್ 12ರಂದು ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಯಾಗಲಿದೆ.

ಇನ್ನಷ್ಟು ಓದಿರಿ

Scroll to Top