ಮಹಾರಾಷ್ಟ್ರ ಮಳೆಗೆ ಅಮೀರ್ ಖಾನ್ 25 ಲಕ್ಷ ದೇಣಿಗೆ!

Picture of Cinibuzz

Cinibuzz

Bureau Report

ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ತತ್ತರಿಸಿರುವ ಮಹಾರಾಷ್ಟ್ರದ ಪ್ರವಾಹ ಸಂತ್ರಸ್ತರಿಗೆ ಬಾಲಿವುಡ್ ನಟ ಅಮೀರ್ ಖಾನ್ ಅವರು 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಬಾಲಿವುಡ್ ನಟ ಅಮೀರ್ ಖಾನ್ ಅವರು ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಜನರ ನೋವಿಗೆ ಸ್ಪಂದಿಸಿದ ಸೆಲೆಬ್ರಿಟಿಗಳು ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ.

ಇನ್ನಷ್ಟು ಓದಿರಿ

Scroll to Top