ಸ್ವಿಜರ್‌ಲ್ಯಾಂಡ್‌ನಿಂದ ಬಂದ ಒಡೆಯ!

Picture of Cinibuzz

Cinibuzz

Bureau Report

ಸಂದೇಶ್ ನಾಗರಾಜ್ ಅರ್ಪಿಸಿ, ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎನ್.ಸಂದೇಶ್ ಅವರು ನಿರ್ಮಿಸುತ್ತಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಒಡೆಯ‘ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಹತ್ತು ದಿನಗಳ ಕಾಲ ಸ್ವಿಜರ್ ಲ್ಯಾಂಡ್‌ನಲ್ಲಿ ನಡೆದಿದೆ. ದರ್ಶನ್ ಹಾಗೂ ರಾಘವಿ ತಿಮ್ಮಯ್ಯ ಅಭಿನಯಿಸಿದ ಈ ಹಾಡುಗಳನ್ನು ಜಿಮಿಜಿಪ್ ಹಾಗೂ ಎರಡು ಕ್ಯಾಮೆರಾಗಳನ್ನು ಬಳಸಿ ಅದ್ದೂರಿಯಾಗಿ ಚಿತ್ರಿಸಿಕೊಳ್ಳಲಾಗಿದೆ. ಕಲೈ ಅವರು ಈ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಸುಮಾರು ಐವತ್ತು ಜನರ ತಂಡ ಸ್ವಿಜರ್‌ಲ್ಯಾಂಡ್‌ಗೆ ಪಯಣ ಬೆಳೆಸಿತ್ತು. ಈ ಹಾಡುಗಳ ಚಿತ್ರೀಕರಣದೊಂದಿಗೆ ‘ಒಡೆಯ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ.

ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ, ಡಾ. ವಿ.ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ ಅಭಿನಯಿಸಿದ್ದಾರೆ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇನ್ನಷ್ಟು ಓದಿರಿ

Scroll to Top