ಅರ್ಜುನ್ ಗೌಡ ಚಿತ್ರದಲ್ಲಿ ರಾಹುಲ್ ದೇವ್!

Picture of Cinibuzz

Cinibuzz

Bureau Report


ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ `ಅರ್ಜುನ್ ಗೌಡ` ಚಿತ್ರದಲ್ಲಿ ಬಹುಭಾಷ ನಟ ರಾಹುಲ್ ದೇವ್ ಮುಖ್ಯ ಖಳನಟನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಇವರು ಅಭಿನಯಿಸಿದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ಅಪಾರವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೆಟ್‍ನಲ್ಲಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದ್ದು, ಮಾಸ್ ಮಾದ ಸಾಹಸ ನಿರ್ದೇಶನ ಮಾಡಿದ್ದಾರೆ.

ಪ್ರಜ್ವಲ್ ದೇವರಾಜ್ ಈ ಚಿತ್ರದ ನಾಯಕಾರಾಗಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆಯಾಗಲಿದ್ದು, ಜನವರಿಯಲ್ಲಿ ಚಿತ್ರ ತೆರೆಗೆ ಬರಲಿದೆ. ಶಂಕರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಧರ್ಮವಿಶ್ ಅವರ ಸಂಗೀತ ನಿರ್ದೇಶನವಿದೆ. ಜೈಆನಂದ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ಅವರು ಈ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಬಾಕ್ಸರ್ ಪಾತ್ರ ನಿರ್ವಹಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಪ್ರಜ್ವಲ್ ದೇವರಾಜ್, ಪ್ರಿಯಾಂಕ ತಿಮ್ಮೇಶ್, ಸಾಧುಕೋಕಿಲ, ರಾಹುಲ್ ದೇವ್, ರೇಖ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

ಇನ್ನಷ್ಟು ಓದಿರಿ

Scroll to Top