ಹಣವಿಲ್ಲದವರ ಮಾತು!

Picture of Cinibuzz

Cinibuzz

Bureau Report

ಜನಪ್ರಿಯ ತಾರಾಜೋಡಿ ದಿಗಂತ್ ಹಾಗೂ ಐಂದ್ರಿತ ರೇ ನಾಯಕ – ನಾಯಕಿಯಾಗಿ ನಟಿಸಿರುವ “ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರಕ್ಕೆ ಪ್ರಜ್ವಲ್ ಪೈ ಅವರ‌ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.

ಈಗಾಗಲೇ ಚಿತ್ರೀಕರಣ ಪೂರ್ಣವಾಗಿದ್ದು, ಸಾಗರ, ಸಿಗಂಧೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಉಪ್ಪಿ ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪತ್ರಕರ್ತ ವಿನಾಯಕ ಕೋಡ್ಸರ ಈ ಚಿತ್ರ ನಿರ್ದೇಶಿಸಿದ್ದಾರೆ.‌ ಕೆಲವು ಕಿರು ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ವಿನಾಯಕ ಕೋಡ್ಸರ ಅವರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ನಿರ್ದೇಶನದ ಚಿತ್ರ.

ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ‌ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಂದ ಕಿಶೋರ್ ಎನ್ ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ.

ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ದಿಗಂತ್ ಐಂದ್ರಿತಾ ರೇ, ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಘವನ್, ಕಾಸರಾಗೋಡು ಚಿನ್ನ, ಪಿ.ಡಿ.ಸತೀಶ್‌ ಹಾಗೂ ನೀನಾಸಂನ ಹಲವು ಕಲಾವಿದರು ‌ಭಾಗವಹಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top