ಹಾಸ್ಟೆಲ್ ಹುಡುಗರಿಗೆ ಸ್ಟಾರ್‌ ಗಳ ಬೆಂಬಲ!

Picture of Cinibuzz

Cinibuzz

Bureau Report

ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಸೆಟ್ಟೇರಿದ ದಿನದಿಂದಲೂ ಸಖತ್ ಸುದ್ದಿಯಲ್ಲಿರುವ, ಕ್ರಿಯೇಟಿವ್ ಕಂಟೆಂಟ್ ಮೂಲಕ ಎಲ್ಲರ ಗಮನ ಸೆಳೆದಿರುವ ಈ ಚಿತ್ರದ ಮೊದಲ ಸಾಂಗ್ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಸ್ಟಾರ್ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧನಂಜಯ, ಧ್ರುವ ಸರ್ಜಾ ಚಿತ್ರದ ಮೊದಲ ಸಾಂಗ್ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಹಾಸ್ಟೆಲ್ ಹುಡುಗರು ಸಿನಿಮಾ ಸ್ಯಾಂಡಲ್ ವುಡ್ ಸಿನಿ ಪ್ರೇಕ್ಷಕರಲ್ಲಿ ಅಪಾರ ನಿರೀಕ್ಷೆ ಹುಟ್ಟು ಹಾಕಿದೆ. ಬಿಡುಗಡೆಗೆ ರೆಡಿಯಾಗಿರುವ ಈ ಚಿತ್ರ ಹಾಡುಗಳ ಮೂಲಕ ಪ್ರೇಕ್ಷಕರ ಮನಗೆಲ್ಲೋಕೆ ಹೊರಟಿದೆ. ಇಂದು ಚಿತ್ರದ ‘ಪ್ರೊಟೆಸ್ಟ್ ಸಾಂಗ್’ ಚಿತ್ರತಂಡ ಬಿಡುಗಡೆ ಮಾಡಿದೆ. ಹಾಸ್ಟೆಲ್ ನಲ್ಲಿರುವ ಹುಡುಗರ ಕಥೆ, ವ್ಯಥೆ ಇರುವ ಈ ಹಾಡನ್ನು ಸಖತ್ ಮಜವಾಗಿ ಕಟ್ಟಿಕೊಡಲಾಗಿದ್ದು, ಅದಕ್ಕೆ ತಕ್ಕಂತೆ ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಮ್ಯೂಸಿಕ್ ಹಾಗೂ ಹಾಡು ಕಿಕ್ ನೀಡುತ್ತಿದೆ.

hostel hudugaru bekagiddare

ಯೂತ್ ಸಬ್ಜೆಕ್ಟ್ ಒಳಗೊಂಡ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಇರಲಿದೆ. ಪುನೀತ್ ರಾಜ್ ಕುಮಾರ್, ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ ನಟಿಯರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ. ಪ್ರತಿ ಬಾರಿ ಯೂನೀಕ್ ಕಾನ್ಸೆಪ್ಟ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಮಾಡಿ ಅಪಾರ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮೆಚ್ಚಿಕೊಂಡು ಪರಂವಃ ಪಿಕ್ಚರ್ಸ್ ಮೂಲಕ ಈ ಚಿತ್ರವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

ಇನ್ನಷ್ಟು ಓದಿರಿ

Scroll to Top