ಲೋಹಿತ್ ನಿರ್ದೇಶನದ ಹಾರರ್ ಸಿನಿಮಾದಲ್ಲಿ ನಟಿ ಮಾನ್ವಿತಾ ಕಾಮತ್

Picture of Cinibuzz

Cinibuzz

Bureau Report

‘ಕ್ಯಾಪ್ಚರ್’ನಲ್ಲಿ ಪ್ರಿಯಾಂಕಾ ಮಗಳಾಗಿ ಮಾನ್ವಿತಾ ನಟನೆ

ಸ್ಯಾಂಡಲ್‌ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್‌ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ.

ಕ್ಯಾಪ್ಚರ್ ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ.

Capture_kannada_movie_manvitha_lohith_priyanka
Capture_kannada_movie_manvitha_lohith_priyanka

ಮಾನ್ವಿತಾ ಮಾತು

‘ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಮೊದಲ ತುಂಬಾ ಭಯವಿತ್ತು. ಆದರೆ ಪಾತ್ರ ಚೆನ್ನಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ. 15 ದಿನಗಳು ಗೋವಾದಲ್ಲಿ ಶೂಟಿಂಗ್ ಮಾಡಿದ್ವಿ, ಪ್ರಿಯಾಂಕಾ ಮೇಡಮ್ ಜೊತೆ ಕೆಲಸ ಮಾಡಿದ್ದು ತುಂಬಾ ಇಷ್ಟವಾಯಿತು. ಶೂಟಿಂಗ್ ಮುಗಿಸಿ ಮನೆಗೆ ಬಂದಾಗ ತುಂಬಾ ದೃಷ್ಟಿ ಆಗಿತ್ತು ಅನಿಸುತ್ತೆ. ಜ್ವರ ಕೂಡಡ ಬಂದಿತ್ತು. ದೃಷ್ಟಿ ತೆಗಿಸಿಕೊಂಡ ಮೇಲೆ ಸರಿ ಆಯಿತು’ ಎಂದು ಹೇಳಿದರು.

ಮಾನ್ವಿತಾ ಕೊನೆಯದಾಗಿ ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ವರ್ಷದ ಬಳಿಕ ತೆರೆಮೇಲೆ ಬರುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದಲ್ಲಿ ಮಾನ್ವಿತಾ ಲುಕ್ ಹೇಗಿರಲಿದೆ ಎನ್ನುವುದು ಸದ್ಯದಲ್ಲೇ ರಿವೀಲ್ ಆಗಲಿದೆ. ಕ್ಯಾಪ್ಚರ್ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ.

ಇನ್ನಷ್ಟು ಓದಿರಿ

Scroll to Top