ಈದ್ ಹಬ್ಬಕ್ಕೆ ‘ಬಡೆ ಮಿಯಾನ್ ಚೋಟೆ ಮಿಯಾನ್’ ರಿಲೀಸ್

Picture of Cinibuzz

Cinibuzz

Bureau Report

‘ಬಡೆ ಮಿಯಾನ್ ಚೋಟೆ ಮಿಯಾನ್’ ಸಿನಿಮಾದ ಟ್ರೇಲರ್‌ ಈಗಾಗಲೇ ಕುತೂಹಲ ಹೆಚ್ಚಿಸಿದೆ. ಅಕ್ಷಯ್ ಕುಮಾರ್ ಹಾಗೂ ಟೈಗರ್‌ ಶ್ರಾಫ್ ಜುಗಲ್ ಬಂದಿ ನೋಡೋದಿಕ್ಕೆ ಪ್ರೇಕ್ಷಕರು ಕಾತರರಾಗಿದ್ದಾರೆ. ಇದೇ ತಿಂಗಳ‌ 11ರ ಈದ್ ಮಿಲ್ ಹಬ್ಬಕ್ಕೆ ಬಡೆ ಮಿಯಾನ್ ಚೋಟೆ ಮಿಯಾನ್ ತೆರೆಗೆ ಬರ್ತಿದೆ.

ಅಕ್ಕಿ ಹಾಗೂ ಟೈಗರ್ ಶ್ರಾಫ್ ನಾಯಕನಾಗಿ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್‌‌‌ ಖಳನಾಯಕನಾಗಿ ಅಭಿಯಸಿದ್ದಾರೆ.ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಇನ್ನಷ್ಟು ಓದಿರಿ

Scroll to Top