ಐದು ವರ್ಷಗಳ ನಂತರ ಬೆಳ್ಳಿತೆರೆಯಲ್ಲಿ ಅನಿರುದ್ದ್ ಚಿತ್ರ.

Picture of Cinibuzz

Cinibuzz

Bureau Report

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ. ಇವರು ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ದ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ‌.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರವನ್ನು “ರಾಘು” ಚಿತ್ರದ ನಿರ್ದೇಶಕ ಎಂ ಆನಂದರಾಜ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರು ಬರೆದಿದ್ದು, ಸಂಭಾಷಣೆ ಗಣೇಶ್ ಪರಶುರಾಮ್ ಅವರದು. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ‌. ಮೊದಲ ಪೋಸ್ಟರ್ ನಿಂದ ಹಿಡಿದು ಇತ್ತೀಚೆಗೆ ಬಿಡುಗಡೆಯಾದ ಟೈಟಲ್ ಟ್ರ್ಯಾಕ್ ತನಕ ಎಲ್ಲವೂ ಜನಮನಸೂರೆಗೊಂಡಿದೆ‌.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

ಇನ್ನಷ್ಟು ಓದಿರಿ

Scroll to Top