ಕಲಾಸಾಮ್ರಾಟ್ ಡಾ||ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು “

Picture of Cinibuzz

Cinibuzz

Bureau Report

ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ “ಪ್ರೊಡಕ್ಷನ್ ನಂ 1” ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.
ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ “ಪ್ರೊಡಕ್ಷನ್ ನಂ 1” ಚಿತ್ರದ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ಓದಿರಿ

Scroll to Top