ಈ ವಾರ ತೆರೆಗೆ “ಚಿಲ್ಲಿ ಚಿಕನ್”

Picture of Cinibuzz

Cinibuzz

Bureau Report

ಮೆಟನೋಯ್ ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರ ನಿರ್ಮಾಣದ, ಪ್ರತೀಕ್ ಪ್ರಜೋಶ್ ಅವರ ನಿರ್ದೇಶನದ, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ‘ಚಿಲ್ಲಿ ಚಿಕನ್’ ಈ ವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು, ಉತ್ತರ ಭಾರತದಿಂದ ಬೆಂಗಳೂರಿಗೆ ಬಂದ ಐವರು ಹುಡುಗರು ಚೈನೀಸ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತ, ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಹೋಟೆಲ್ ಮಾಡ್ತಾರಾ, ಇಲ್ವಾ ಅನ್ನೋದೇ ಚಿಲ್ಲೀ ಚಿಕನ್ ಚಿತ್ರದ ಕಥಾಹಂದರ.

ಈ ಚಿತ್ರಕ್ಕಾಗಿ ಬೇರೆ ಬೇರೆ ರಾಜ್ಯಗಳ ಪ್ರತಿಭೆಗಳು ಒಂದಾಗಿದ್ದಾರೆ. ನಿರ್ದೇಶಕ ಕೇರಳದವರಾದರೆ, ನಿರ್ಮಾಪಕ ಗುಜರಾತಿನವರು. ಕರ್ನಾಟಕ, ಮಣಿಪುರ, ಮೇಘಾಲಯ, ಚೆನ್ನೈನ ಕಲಾವಿದರು. ಪ್ರತೀಕ್ ಪ್ರಜೋಶ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರದ ಪ್ರಮುಖ ತಾರಾಗಣದಲ್ಲಿ ಬಿ.ವಿ.ಶೃಂಗಾ, ರಿನಿ, ನಿತ್ಯಶ್ರೀ, ಬಿಜೌ ತಾಂಜಿಂ, ವಿಕ್ಟರ್ ತೌಡಮ್, ಜಿಂಪಾ ಭುಟಿಯಾ, ಟಾಮ್‍ಥಿನ್ ಥೋಕ್‍ಚೋಮ್, ಹಿರಾಕ್ ಸೋನೊವಾಲ್ ಮುಂತಾದವರಿದ್ದಾರೆ.

ಸಿದ್ದಾಂತ್ ಸುಂದರ್ ಅವರ ಸಂಗೀತ ಸಂಯೋಜನೆ, ಶ್ರೀಶ್ ತೋಮರ್ ಅವರ ಛಾಯಾಗ್ರಹಣ, ಆಶಿಕ್ ಕೆ.ಎಸ್ ಅವರ ಸಂಕಲನ, ತ್ರಿಲೋಕ್ ಕೆಎಎಸ್ ಅವರ ಸಂಭಾಷಣೆ ಚಿತ್ರಕ್ಕಿದೆ

ಇನ್ನಷ್ಟು ಓದಿರಿ

Scroll to Top