ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡಲು ಚಿತ್ರತಂಡದ ಸಿದ್ದತೆ.

Picture of Cinibuzz

Cinibuzz

Bureau Report

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು ಜುಲೈ 26ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ ಈ ಚಿತ್ರದ ಬಿಡುಗಡೆಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಈಗ ಬಿಡುಗಡೆ ದಿನಾಂಕ ಸಮೀಪಿಸುತ್ತಿರುವುದರಿಂದ, ಅಭಿಮಾನಿಗಳಿಗೆ ಸಂತಸವಾಗಿದೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಇನ್ನಷ್ಟು ಓದಿರಿ

Scroll to Top