ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಪ್ರಕೃತಿ ಪ್ರೊಡಕ್ಷನ್ಸ್.

Picture of Cinibuzz

Cinibuzz

Bureau Report

ಜುಲೈ 27, ಹೆಬ್ಬುಲಿ”, ರಾಷ್ಟ್ರಪ್ರಶಸ್ತಿ ವಿಜೇತ “ಒಂದಲ್ಲಾ ಎರಡಲ್ಲಾ” ಹಾಗೂ “ರಾಬರ್ಟ್” ಚಿತ್ರಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಫ್ತಾನ್” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

“ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ. ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿರುವುದಾಗಿ ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.

ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ ಜೆ ಹಾಡಿ, ಸಂಗೀತ ನೀಡಿರುವ ಈ ” ದ ಕಫ್ತಾನ್ ” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಇನ್ನಷ್ಟು ಓದಿರಿ

Scroll to Top