“ಮ್ಯಾಕ್ಸಿಮಮ್ ಮಾಸ್” ಆಟ ಆರಂಭ : ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

Picture of Cinibuzz

Cinibuzz

Bureau Report

ಬಹು ಬೇಡಿಕೆಯ ಚಿತ್ರ “ಮ್ಯಾಕ್ಸ್” ಇದೀಗ ತನ್ನ ಮೊದಲ ಗೀತೆ “ಮ್ಯಾಕ್ಸಿಮಮ್ ಮಾಸ್” ಅನ್ನು ಬಿಡುಗಡೆ ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ‌ ಈ ಮಾಸ್ ಗೀತೆಯನ್ನು ಇಂದು ಬಿಡುಗಡೆ ಮಾಡಿ, ಎಲ್ಲೆಡೆ ಸದ್ದು ಮಾಡುತ್ತಿದೆ.

ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ‌ ಹಾಡಿಗೆ, ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಸಾಹಿತ್ಯ ರಚಿಸಿದ್ದು, ಚೇತನ್ ಗಂಧರ್ವ ಮತ್ತು ಎಂ.ಸಿ. ಬಿಜ್ಜು ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿರುತ್ತಾರೆ. ಒಟ್ಟಾರೆ ಅಭಿಮಾನಿಗಳಿಗೆ ಈ‌ ಮಾಸ್‌ ಗೀತೆಯು ರಸದೌತಣವನ್ನು ಉಣಬಡಿಸಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

“ಮ್ಯಾಕ್ಸ್” ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ, ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿರುತ್ತಾರೆ.

ಇನ್ನಷ್ಟು ಓದಿರಿ

Scroll to Top