ಕಮಾಲ್ ಮಾಡಲು ಬರುತ್ತಿರುವ ಕೋಮಲ್!

Picture of Cinibuzz

Cinibuzz

Bureau Report

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ “ಯಲಾಕುನ್ನಿ” ಚಿತ್ರ ಈ ವಾರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 

ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌. ಕೋಮಲ್ ಅವರು ಕನ್ನಡದ ಹೆಸರಾಂತ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್, ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.‌

yalakunni_komalkumar_cinibuzz_kannada
yalakunni_komalkumar_cinibuzz_kannada

ವಿಶೇಷವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

ಇನ್ನಷ್ಟು ಓದಿರಿ

Scroll to Top