ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ .

Picture of Cinibuzz

Cinibuzz

Bureau Report

ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದೇ ತಿಂಗಳ 20ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

ಸಿರಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಪಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ವಿ.ಲವ ಅವರೆ ನಿರ್ದೇಶನ ಮಾಡುತ್ತಿದ್ದಾರೆ. “ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಡೇವಿ ಸುರೇಶ್ ಅವರ ಸಂಗೀತ ನಿರ್ದೇಶನವಿರುವ “ಬಾಸ್” ಚಿತ್ರಕ್ಕೆ “ಸತ್ಯಮೇವ ಜಯತೇ” ಎಂಬ ಅಡಿಬರಹವಿದೆ. ಇದೊಂದು ಬೆಂಗಳೂರಿನಲ್ಲಿ ನಡೆದ ನೈಜಘಟನೆಯನ್ನು ಆಧರಿಸಿದ ಚಿತ್ರವಾಗಿದೆ.

ಇನ್ನಷ್ಟು ಓದಿರಿ

Scroll to Top