ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ

Picture of Cinibuzz

Cinibuzz

Bureau Report

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ

ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ನೋಡಲು ಉಪೇಂದ್ರ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ‌.

ಇನ್ನಷ್ಟು ಓದಿರಿ

Scroll to Top