ಕೆ.ಮಂಜು ಅವರ ಪುತ್ರ ಶ್ರೇಯಸ್ ಕೆ.ಮಂಜು,ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ನಟಿಸಿರುವ ‘ವಿಷ್ಣು ಪ್ರಿಯಾ’ ಫೆಬ್ರವರಿ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ತೊಂಭತ್ತರ ದಶಕದ ಪ್ರೇಮಕಥೆಯನ್ನು ಹೇಳುವ ಈ ಚಿತ್ರದ ‘ಸುಮ್ಮನೆ ಸುಮ್ಮನೆ’ ಎಂಬ ಕ್ಯೂಟ್ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಸಖತ್ ವೈರಲ್ ಆಗುತ್ತಿದೆ. ವಿ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ ಇರುವ ಈ ಹಾಡಿನಲ್ಲಿ ಶ್ರೇಯಸ್, ಪ್ರಿಯಾ ವಾರಿಯರ್ ಜೋಡಿಯ ಲವಲವಿಕೆಯ ಅಭಿನಯ ನೋಡುಗರನ್ನು ಸೆಳೆಯುತ್ತಿದೆ. ಮಲಯಾಳಂನ ವಿ.ಕೆ.ಪ್ರಕಾಶ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಗೋಪಿಸುಂದರ್ ಈ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದಾರೆ.

ಈ ಚಿತ್ರಕ್ಕೆ ರವಿ ಶ್ರೀವತ್ಸ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ವಿನೋದ್ ಭಾರತಿ ಅವರ ಛಾಯಾಗ್ರಹಣ, ಸುರೇಶ್ ಅರಸ್ ಅವರ ಸಂಕಲನ ಚಿತ್ರಕ್ಕಿದೆ.